Advertisement

ಸರಕಾರಿ ಗೌರವದೊಂದಿಗೆ ಮಾಜಿ ಸಚಿವ ವಿ. ಧನಂಜಯ ಕುಮಾರ್ ಅಂತ್ಯ ಸಂಸ್ಕಾರ

10:13 AM Mar 05, 2019 | Team Udayavani |

ವೇಣೂರು: ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ಅವರು ಮಾ.4 ರಂದು ನಿಧನ ಹೊಂದಿದ್ದು, ಮಂಗಳವಾರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿನ ವೇಣೂರು ಮನೆಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿತು.

Advertisement

ಪೂರ್ವಾಹ್ನ 11.50ಕ್ಕೆ ಅವರ ಪಾರ್ಥಿವ ಶರೀರ ವೇಣೂರು ತಲುಪಿತು. ನಗರದಲ್ಲಿ ಮೆರವಣಿಗೆ ಮೂಲಕ ಶ್ರೀ ಪಾರ್ಶ್ವನಾಥ ಬಸದಿಯಲ್ಲಿ ಪೂಜೆ ಸಲ್ಲಿಸಿ, ಬಳಿಕ 12.25ಕ್ಕೆ ಪಂಜಾಲುಬೈಲು ಮನೆಗೆ ತರಲಾಯಿತು. ಅಂಬ್ಯುಲೆನ್ಸ್‌ನಿಂದ ಪಾರ್ಥಿವ ಶರೀರವನ್ನು ತೆಗೆಯುತ್ತಿದ್ದಂತೆ ಮನೆಮಂದಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಜೈನ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಿತು. 


ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ದ.ಕ. ಜಿಲ್ಲಾಧಿಕಾರಿ ಡಾ| ಶಶಿಕಾಂತ್ ಶೆಂಥಿಲ್, ಮಾಜಿ ಸಚಿವ ಬಿ. ರಮಾನಾಥ ರೈ, ಕೆ. ಅಭಯಚಂದ್ರ ಜೈನ್, ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ, ದ.ಕ. ಪೊಲೀಸ್ ಅಧೀಕ್ಷಕ ಬಿ.ಎಂ. ಲಕ್ಷ್ಮೀ ಪ್ರಸಾದ್, ಸಹಾಯಕ ಅಧೀಕ್ಷಕ ಸೈದುಲ್ಲಾ ಅಧಾವತ್, ಪುತ್ತೂರು ಸಹಾಯಕ ಕಮಿಷನರ್ ಡಾ| ಎಚ್.ಸಿ. ಕೃಷ್ಣಮೂರ್ತಿ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವ,  ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹಷೇಂದ್ರ ಕುಮಾರ್, ಡಾ| ಯಶೋವರ್ಮ, ಕ್ಯಾ| ಗಣೇಶ್ ಕಾರ್ಣಿಕ್, ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ವೇಣೂರು ಪೊಲೀಸ್ ಉಪನಿರೀಕ್ಷಕ ನಾಗರಾಜ್ ಎಸ್.ಇ, ವೇಣೂರು ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮಣಿ, ಪ್ರತಾಪ್‌ಸಿಂಹ ನಾಯಕ್, ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಊರ ನಾಗರಿಕರು ಮನೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next