Advertisement

ಪೀಠೊಪಕರಣ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ

11:22 AM Oct 11, 2021 | Team Udayavani |

ಬೆಂಗಳೂರು: ಶಾರ್ಟ್‌ ಸರ್ಕ್ನೂಟ್‌ನಿಂದ ಪಿಠೊಪಕರಣ ತಯಾರಿಕಾ ಘಟಕಕ್ಕೆ ಬೆಂಕಿ ತಗುಲಿರುವ ಘಟನೆ ಬ್ಯಾಟಾರಾಯನಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Advertisement

ನಗರದ ಮೈಸೂರು ರಸ್ತೆಯ ಬ್ಯಾಟರಾಯನಪುರದ ಟಿಂಬರ್‌ ಬಡಾವಣೆಯ ಸಂಜಯ್‌ ಎಂಬುವರಿಗೆ ಸೇರಿದ “ಲಕ್ಷ್ಮೀ ಎಂಟರ್‌ಪ್ರೈಸಸ್‌’ ಘಟಕದಲ್ಲಿ ತಡರಾತ್ರಿ 1.30ರ ಸಮಯಕ್ಕೆ ಅಗ್ನಿ ಅವಘಡ ಸಂಭವಿಸಿದ್ದು, ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ, ಇಡೀ ಘಟಕಕ್ಕೆ ಆವರಿಸಿದೆ.

ಇದನ್ನೂ ಓದಿ:- ‘ಕಿಂಗ್ ಈಸ್ ಬ್ಯಾಕ್..’ ಹಳೇಯ ಖದರ್ ಗೆ ಮರಳಿದ ಮಾಹಿ, ಸಂತಸದಲ್ಲಿ ತೇಲಾಡಿದ ವಿರಾಟ್

ಪರಿಣಾಮ ಪ್ಲಾಸ್ಟಿಕ್‌ ಕುರ್ಚಿಗಳು, ಸೋಪಾಸೆಟ್‌, ಮರದ ಪೀಠೊಪಕರಣಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳ ಜತೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಘಟಕದಲ್ಲಿರುವ ಅವಶೇಷಗಳ ತೆರವು ಮಾಡುವ ಕಾರ್ಯ ಮುಂದುವರಿದಿದೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಾಥಮಿಕ ತನಿಖೆಯಿಂದ ಶಾರ್ಟ್‌ ಸರ್ಕ್ನೂಟ್‌ನಿಂದ ಬೆಂಕಿ ಹೊತ್ತಿರಬಹುದು ಎನ್ನಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next