Advertisement
ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿಯ ವಿಶೇಷ ಆಯುಕ್ತ ರಂದೀಪ್, ಹಸಿ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಗುತ್ತಿಗೆದಾರರು ಹೆಚ್ಚು ಮೊತ್ತದ ಬಿಡ್ ಸಲ್ಲಿಸಿದ್ದಾರೆ. ಆಯ್ಕೆಯಾಗಿರುವ ಗುತ್ತಿಗೆದಾರರು ತಮ್ಮಲ್ಲಿರುವ ವಾಹನಗಳ ಮಾಹಿತಿಯನ್ನು ಸರ್ಮಪಕವಾಗಿ ನೀಡದೆ ಇರುವುದರಿಂದ ಕಾರ್ಯಾದೇಶ ನೀಡಲು ಸಾಧ್ಯವಾಗಿಲ್ಲ ಎಂದು ಮಾಹಿತಿ ನೀಡಿದರು.
Related Articles
Advertisement
ಕಸದಿಂದ ವಿದ್ಯುತ್ ತಯಾರಿಕೆಗೆ ಗ್ರೀನ್ ಸಿಗ್ನಲ್: ಕಸದಿಂದ ವಿದ್ಯುತ್ ಉತ್ಪಾದನೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೊರವಲಯದಲ್ಲಿರುವ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಈಗಾಗಲೇ ಟೆಂಡರ್ ನೀಡಲಾಗಿದ್ದು, ನಗರದ ನಾಲ್ಕು ಭಾಗಗಳಲ್ಲಿ ವಿದ್ಯುತ್ ಉತ್ಪಾದನೆಗೆ ತಯಾರಿ ನಡೆಯುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದರು. ಚಿಕ್ಕನಾಗಮಂಗಲ- ತ್ರೀ ವೇಸ್ಟ್ ಕಂಪನಿ, ಕೆಪಿಸಿಎಲ್- ಬಿದಡಿ ಸಂಸ್ಥೆ. ದೊಡ್ಡಬಿದಿರೆಕಲ್ಲು, – ಇಂಡಿಯಂ ಸಂಸ್ಥೆ, ಕನ್ನಹಳ್ಳಿ – ಸತರಾಂ ಸಂಸ್ಥೆಗಳು ವೇಸ್ಟು ಟು ಎನರ್ಜಿ ಪ್ಲಾಂಟ್‌ನಲ್ಲಿ ಉತ್ಪಾದನೆಯಾಗಲಿದೆ.
ಕಸ ನಿರ್ವಹಣೆ ಪ್ರತ್ಯೇಕ ಕಾರ್ಪೊರೇಷನ್: ಬೆಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಕಾರ್ಪೊರೇಷನ್ ರಚನೆ ಮಾಡುವುದಕ್ಕೆ ಸರ್ಕಾರ ಸೂಚಿಸಿದ್ದು, ಈ ಸಂಬಂಧ ಬಿಬಿಎಂಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದು ಪಾಲಿಕೆಯ ಅಂಗವಾಗಿಯೇ ಉಳಿಯಲಿದೆ. ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ಇರುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಹೊಸ ಟೆಂಡರ್ ಪ್ರಕ್ರಿಯೆ ಕೆಲವು ತಾಂತ್ರಿಕ ಕಾರಣಗಳಿಂದ ತಡವಾಗಿದ್ದು, ಅ. 1ರಿಂದ ಹೊಸ ಗುತ್ತಿಗೆದಾರರ ನೇಮಕ ಸಾಧ್ಯವಿಲ್ಲ. ಹೊಸ ಟೆಂಡರ್ ಪ್ರಕ್ರಿಯೆ ಮುಗಿಯುವ ವರೆಗೆ ಬಿಬಿಎಂಪಿಯಿಂದಲೇ ತ್ಯಾಜ್ಯ ನಿರ್ವಹಣೆ ಮಾಡಲಾಗುವುದು.-ರಂದೀಪ್, ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ) *** ಪ್ಲಾಸ್ಟಿಕ್ ತಡೆಗೆ ಪ್ಲಾಗ್ ರನ್ ಅಭಿಯಾನ
ಬೆಂಗಳೂರು: ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅ.2ಕ್ಕೆ ಬಿಬಿಎಂಪಿ ವ್ಯಾಪ್ತಿಯ ಆಯ್ದ 50 ಪ್ರದೇಶಗಳಲ್ಲಿ ಪ್ಲಾಗ್ ರನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಹೇಳಿದರು. ಮಂಗಳವಾರ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ, ಯುನೈಟೆಡ್ ವೇ ಇಂಡಿಯಾ ಮತ್ತು ಗೋ ನೇಟಿವ್ ಸಹಯೋಗದಲ್ಲಿ “ಪ್ಲಾಗ್ ರನ್’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸುವವರು 2 ಕಿ.ಮೀ. ದೂರ ಓಡುವುದಲ್ಲದೆ, ರಸ್ತೆಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಅನ್ನು ಸಂಗ್ರಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸ್ವತ್ಛತಾ ಸೇವಾ ಕಾರ್ಯಕ್ರಮವನ್ನು ಘೋಷಣೆ ಮಾಡಿದ್ದು, ಇದರಡಿ ಅ. 2ರಂದು ನಗರದ 50 ಕಡೆಗಳಲ್ಲಿ ಸಾವಿರಾರು ಮಂದಿ ಸೇರಿ ಓಟದ ಜತೆಗೆ ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಲಿದ್ದಾರೆ. ಹೀಗೆ ಸಂಗ್ರಹ ಮಾಡುವ ಪ್ಲಾಸ್ಟಿಕ್ ಅನ್ನು ಹಸಿರುದಳದವರು ಸ್ವೀಕರಿಸಲಿದ್ದು, ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಿದ್ದಾರೆ ಎಂದರು. ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದರೂ ಸಂಪೂರ್ಣವಾಗಿ ನಿಷೇಧವಾಗಿಲ್ಲ. 2016ರಿಂದ ಇಲ್ಲಿಯವರಿಗೆ ಬಿಬಿಎಂಪಿ ವಿವಿಧ ಕಡೆ ದಾಳಿ ಮಾಡಿ 32 ಸಾವಿರ ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದು, 3.5 ಕೋಟಿ ರೂ. ದಂಡ ವಿಧಿಸಲಾಗಿದೆ ಎಂದು ತಿಳಿಸಿದರು. ವಿಶೇಷ ಆಯುಕ್ತ ರಂದೀಪ್ ಮಾತನಾಡಿ, ಅಭಿಯಾನಕ್ಕೆ ಬಿಬಿಎಂಪಿಯಿಂದ 15 ಲಕ್ಷರೂ.ಗಳನ್ನು ನೀಡಲಾಗಿದೆ. ಒಂದು ವಾರಗಳ ಕಾಲ ನಗರದಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಅನ್ನು ಪ್ರತ್ಯೇಕವಾಗಿ ಸಂಗ್ರಹ ಮಾಡುವಂತೆ ಕಸ ಸಂಗ್ರಹ ಮಾಡುವ ಆಟೋ ಟಿಪ್ಪರ್‌ಗಳವರಿಗೆ ಸೂಚಿಸಲಾಗಿದೆ. ಇದರಿಂದ ನಗರದಲ್ಲಿ ಒಂದು ಬಾರಿ ಬಳಕೆ ಮಾಡಿ ಬಿಸಾಡುವ ಪ್ಲಾಸ್ಟಿಕ್ ಪ್ರಮಾಣ ಎಷ್ಟಿದೆ, ಅನವಶ್ಯಕವಾಗಿ ನಗರದಲ್ಲಿ ಎಷ್ಟು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎನ್ನುವುದು ತಿಳಿಯಲಿದೆ ಎಂದು ಹೇಳಿದರು. ಕಾರ್ಯಕ್ರಮದ ಸಂಚಾಲಕ ರಾಮಕೃಷ್ಣ ಗಣೇಶ್ ಮಾತನಾಡಿ, ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ವರ್ಷ 7 ಸಾವಿರ ಮಂದಿ ಭಾಗಿಯಾಗಿದ್ದರು. ಈ ವರ್ಷವೂ ಇನ್ನೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಈಗಾಗಲೇ 5 ಸಾವಿರ ಜನ ಈ ಅಭಿಯಾನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಬಾರಿ ಕೊಳಚೆ ಪ್ರದೇಶ, ಮಾರುಕಟ್ಟೆ ಪ್ರದೇಶಗಳಲ್ಲೂ ಪ್ಲಾಗ್ ರನ್ ಯೋಜನೆ ಹಮ್ಮಿಕೊಳ್ಳಲಾಗುವುದು. ಆಸಕ್ತರು www.indiaplog.run ವೆಬ್‌ಸೈಟ್‌ನಲ್ಲಿ ಹೆಸರು ನೋಂದಾಣಿ ಮಾಡಿಕೊಳ್ಳಬಹುದು ಎಂದರು.