Advertisement

ಪ್ಲಾಸ್ಟಿಕ್‌ ಬಳಕೆಯಿಂದ ಭವಿಷ್ಯದಲ್ಲಿ ಗಂಡಾಂತರ

03:49 PM Sep 21, 2022 | Team Udayavani |

ಶಹಾಬಾದ: ಪ್ಲಾಸ್ಟಿಕ್‌ ರಾಸಾಯನಿಕಗಳಿಂದ ಪರಿಸರಕ್ಕೆ ಆಗಬಹುದಾದ ದುಷ್ಟರಿಣಾಮಗಳ ಬಗ್ಗೆ ನಾವು ಮುನ್ನಚ್ಚರಿಕೆ ವಹಿಸದಿದ್ದಲ್ಲಿ ಭವಿಷ್ಯದಲ್ಲಿ ತೀವ್ರ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಅಶೋಕ ಬಿಲಗುಂದಿ ಹೇಳಿದರು.

Advertisement

ನಗರಸಭೆಯಿಂದ ಪ್ಲಾಸ್ಟಿಕ್‌ನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸಮಾಜದಲ್ಲಿ ನಮ್ಮ ಜೀವನ ಶೈಲಿ ಹಾಗೂ ಸಾರ್ವಜನಿಕ ವ್ಯವಸ್ಥೆಯಿಂದ ದಿನೇದಿನೇ ಪ್ಲಾಸ್ಟಿಕ್‌ ಬಳಕೆ ಹೆಚ್ಚಾಗುತ್ತಿರುವುದರಿಂದ ಪರಿಸರಕ್ಕೆ ತೊಂದರೆಯಾಗುತ್ತಿದೆ. ಪ್ಲಾಸ್ಟಿಕ್‌ ಸಕಲ ಜೀವಿಗಳಿಗೂ ವಿಷಕಾರಿಯಾಗಿದೆ. ನಿರ್ವಹಣೆ ತಿಳಿಯದ ಕೆಲವರು ಪ್ಲಾಸ್ಟಿಕ್‌ ಸುಡುವ ಮೂಲಕ ಪರಿಸರ ಕಲುಷಿತಗೊಳಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಮಾತನಾಡಿ, ಸಾರ್ವಜನಿಕರು ಮತ್ತು ಅಂಗಡಿಕಾರರು ಪ್ಲಾಸ್ಟಿಕ್‌ ಬಳಕೆ ಮಾಡದೆ ಪೇಪರ್‌ ಚೀಲ ಮತ್ತು ಪ್ಲಾಸ್ಟಿಕ್‌ ರಹಿತ ಬ್ಯಾಗ್‌ ಬಳಕೆ ಮಾಡಬೇಕು. ಇಲ್ಲವಾದರೆ ಕಡ್ಡಾಯವಾಗಿ ದಂಡ ಹಾಕಲಾಗುವುದು ಎಂದು ತಿಳಿಸಿದರು.

ಆರೋಗ್ಯ ನಿರೀಕ್ಷಕ ಮೋಹಿದ್ದಿನ್‌ ಮಾತನಾಡಿ, ಪ್ಲಾಸ್ಟಿಕ್‌ ನಿಷೇಧ ಕಾಯ್ದೆ ಇದ್ದು, ಸಾರ್ವಜನಿಕರು ಮತ್ತು ಮಾರಾಟಗಾರರು ಸಹಕರಿಸಿದಲ್ಲಿ ನಗರಸಭೆಗೆ ಪ್ರೋತ್ಸಾಹಿಸಿದಂತಾಗುತ್ತದೆ ಎಂದರು. ಅನಿಲಕುಮಾರ ಹೊನಗುಂಟಿ, ಹುಣೇಶ ದೊಡ್ಡಮನಿ ಹಾಗೂ ಪೌರಕಾರ್ಮಿಕರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next