Advertisement
ಮಾಜಿ ಮೇಯರ್, ಸ್ಥಳೀಯ ಮನಪಾ ಸದಸ್ಯಎಂ. ಶಶಿಧರ ಹೆಗ್ಡೆ ಮಾತನಾಡಿ, ಮಂಗಳೂರು ನಗರ ಹಸುರೀಕರಣ ಮಾಡಬೇಕಾದ್ದು ನಮ್ಮೆಲ್ಲರ ಜವಾಬ್ದಾರಿ. ಭವಿಷ್ಯದ ದಿನಗಳಿಗೆ ಹಸುರು ಅತ್ಯಂತ ಅಗತ್ಯ ಮತ್ತು ಅನಿವಾರ್ಯ. ಈ ಕಾರಣದಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕಾಗಿದೆ.ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರ ಆಶಯದಂತೆ ಮಂಗಳೂರು ಪಾಲಿಕೆಯು “ಉದಯವಾಣಿ’ ಸಹಯೋಗದಲ್ಲಿ ವಾರ್ಡ್ ಮಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸುವುದು ಅಭಿನಂದನೀಯ ಎಂದರು.
ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ದಡ್ಡಲಕಾಡಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಈ ಪರಿಸರದಲ್ಲಿ ತ್ಯಾಜ್ಯ ಎಸೆಯುವ ಬ್ಲ್ಯಾಕ್‌ಸ್ಪಾಟ್ ನಿರ್ಮಾಣಗೊಂಡು ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿತ್ತು. ಇದೀಗ ತ್ಯಾಜ್ಯ ಇರುವ ಪ್ರದೇಶ ಸ್ವಚ್ಛಗೊಳಿಸಿ ಅಲ್ಲಿ ವಿವಿಧ ರೀತಿಯ ಗಿಡ ನೆಡುವ ಕಾರ್ಯಕ್ರಮ ನಡೆದಿದೆ. ಇದರೊಂದಿಗೆ ಪರಿಸರ ಸಂರಕ್ಷಣೆಯ ಜತೆ ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ.