Advertisement
ಅವರು ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಪರಿಶೀಲನಾ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡ ಜನತೆಗೆ ನೀಡಿದ ಉಚಿತ ಪಡಿತರ ಆಹಾರ ಕಡಿತಗೊಳಿಸಿದ್ದು ಅದರೊಂದಿಗೆ ಇನ್ನಿತರ ಜನಪರ ಕಾರ್ಯಕ್ರಮಗಳ ಯೋಜನೆಯನ್ನು ಕಡೆಗಣಿಸಿರುವುದರ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಿತ್ತೊಗೆದು ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಲು ಎಲ್ಲ ಕಾರ್ಯಕರ್ತರ ಬದ್ದತೆ ಪ್ರಮುಖವಾಗಿದೆ, ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಪಕ್ಷದ ಯುವ ಕಾರ್ಯಕರ್ತರು ಸಕ್ರೀಯವಾಗಿ ಭಾಗವಹಿಸಿ ನಿರ್ದಿಷ್ಟ ಗುರಿಯನ್ನು ಸಾಧಿಸಬೇಕಾಗಿದೆ, ರಾಷ್ಟ್ರ ಮತ್ತು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಬೇಕಾದರೆ ನಿಮ್ಮೆಲ್ಲರ ಇಚ್ಚಾಶಕ್ತಿ ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
Related Articles
Advertisement
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಬಾಲಕೃಷ್ಣ, ಅಮರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ನಗರಸಭಾ ಮಾಜಿ ಸದಸ್ಯ ವಾಲೇಚಂದ್ರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಮ್ಮ, ಶೈಲಜಾ, ಕವಿತಾ, ಯುವಕಾಂಗ್ರೆಸ್ ಅಧ್ಯಕ್ಷ ವಿನಯ್ ಕುಮಾರ್, ಪ.ಪಂ.ಸದಸ್ಯರುಗಳಾದ ಕೆ.ಆರ್.ಓಬಳರಾಜು, ನಾಗರಾಜು, ನಂದೀಶ್, ಕೆ.ಎಂ.ಫ್. ನಿರ್ದೇಶಕ ಈಶ್ವರಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಎಲ್.ರಾಜಣ್ಣ, ಜಿ.ಪಂ.ಮಾಜಿ ಅಧ್ಯಕ್ಷ ಜಾಲಿಗಿರಿ ಕೃಷ್ಣಮೂರ್ತಿ, ಮಾಜಿ ಸದಸ್ಯ ಪ್ರಸನ್ನ ಕುಮಾರ್, ಗ್ರಾ.ಪಂ. ಮಾಜಿ ಸದಸ್ಯರುಗಳಾದ ಬುಕ್ಕಪಟ್ಟಣ ಲಕ್ಷ್ಮಿ, ಡಿಜಿಟಲ್ ತಾಲೂಕು ಸಂಯೋಜ ಕರಾದ ಕೆ.ವಿ.ಮಂಜುನಾಥ್, ಹೇಮಲತಾ, ಮುಖಂಡರುಗಳಾದ ರುದ್ರಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.