ಬೆಂಗಳೂರು : ಜಿ. ಪರಮೇಶ್ವರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಎಐಸಿಸಿ ಮಾಧ್ಯಮ ಪ್ರಕಟನೆ ತಿಳಿಸಿದೆ.
ಇದೇ ವೇಳೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಎಂ ಸಿದ್ಧರಾಮಯ್ಯನವರೇ ಮುನ್ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಕಟನೆ ಹೇಳಿದೆ.
ಡಿ ಕೆ ಶಿವಕುಮಾರ್ ಅವರನ್ನು ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಎರಡು ಕಾರ್ಯಾಧ್ಯಕ್ಷರ ಹುದ್ದೆಗಳನ್ನು ಸೃಷ್ಟಿಸಲಾಗಿದ್ದು ದಿನೇಶ್ ಗುಂಡೂರಾವ್ ಮತ್ತು ಎಸ್ ಆರ್ ಪಾಟೀಲ್ ಆ ಸ್ಥಾನಗಳನ್ನು ತುಂಬಿದ್ದಾರೆ.
ದಿನೇಶ್ ಗುಂಡೂರಾವ್‌ಗೆ ದಕ್ಷಿಣ ಕರ್ನಾಟಕದ ಉಸ್ತುವಾರಿ ವಹಿಸಲಾಗಿದೆಯಾದರೆ ಎಸ್ ಆರ್ ಪಾಟೀಲ್ ಅವರಿಗೆ ಉತ್ತರ ಕರ್ನಾಟಕದ ಉಸ್ತುವಾರಿ ವಹಿಸಿಕೊಡಲಾಗಿದೆ.
ಸತೀಶ್ ಜಾರಕಿಹೊಳಿ ಅವರನ್ನು ಎಐಸಿಸಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಮಾಜಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಅವರನ್ನು ವರ್ಕಿಂಗ್ ಕಮಿಟಿ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ.
ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಹುದ್ದೆ ಹೊಂದಿರಕೂಡದೆಂಬ ಕಾರಣಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರಿಗೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸೂಚಿಸಲಾಗಿದೆ.