Advertisement

ಪರಮೇಶ್ವರ್‌ ಗೆದ್ದಿದ್ದೇ ಮ್ಯಾಚ್‌ ಫಿಕ್ಸಿಂಗ್‌ ಮಾಡಿ : ಸುರೇಶ್‌ ಗೌಡ

11:01 AM Apr 25, 2019 | Vishnu Das |

ತುಮಕೂರು: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಅವರು ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡು ಗೆದ್ದಿದ್ದು ಹೊರತು ಸ್ವಂತ ಶಕ್ತಿಯಿಂದಲ್ಲ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್‌ ಗೌಡ ಆರೋಪಿಸಿದ್ದಾರೆ.

Advertisement

ಕೊರಟಗೆರೆಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಸುರೇಶ್‌ಗೌಡ, ಪರಮೇಶ್ವರ್‌ ಕಳೆದ ಚುನಾವಣೆಯಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಚೆನ್ನಿಗಪ್ಪ ಅವರಿಗೆ 5 ಕೋಟಿ ರೂಪಾಯಿ ನೀಡಿ ಸುಧಾಕರ್‌ ಲಾಲ್‌ ಅವರನ್ನು ಸೋಲಿಸಿದ್ದರು ಎಂದು ಆರೋಪಿಸಿದ್ದಾರೆ.

ಇದಕ್ಕೆ ಸಹಕಾರಿಯಾಗಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಮ್ಮಿ ಅಭ್ಯರ್ಥಿಯನ್ನ ಕಣಕ್ಕಿಳಿಸಿ ಜೆಡಿಎಸ್‌ನ ಗೌರಿಶಂಕರ್‌ ಗೆಲುವಿಗೆ ಕಾರಣವಾಗಿದ್ದರು ಎಂದರು.

ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ತಪ್ಪಿಸಲು ಈ ರೀತಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿದ್ದಾರೆ ಎಂದು ತೀವ್ರವಾಗಿ ಕಿಡಿ ಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next