Advertisement

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

11:54 PM May 26, 2024 | Team Udayavani |

ಬೆಂಗಳೂರು: ಗೂಂಡಾವರ್ತನೆ, ದಾದಾಗಿರಿ ಮಾಡಿ ಉಳಿದುಕೊಳ್ಳುತ್ತೇವೆ ಅಂತ ತಿಳಿದಿದ್ದರೆ ಅದು ಭ್ರಮೆ. ಶಾಸಕರಾಗಲಿ, ಸಂಸದರಾಗಲಿ, ಇನ್ನಾéರಾದ್ರೂ ಆಗಲಿ ಯಾರನ್ನೂ ಬಿಡುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು.

Advertisement

– ಇದು ಈಚೆಗೆ ನಡೆದ ಬೆಳ್ತಂಗಡಿ ಮತ್ತು ದಾವಣಗೆರೆಯ ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸ್‌ ಠಾಣೆಗೆ ನುಗ್ಗಿದವರಿಗೆ ಗೃಹ ಸಚಿವ ಡಾ| ಪರಮೇಶ್ವರ್‌ ನೀಡಿದ ಎಚ್ಚರಿಕೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ. ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ? ಯಾರು ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಪದೇಪದೆ ಹೇಳುತ್ತಿದ್ದೇನೆ. ಕಾನೂನು ಕೈಗೆತ್ತಿಕೊಂಡರೆ ಅವರ ವಿರುದ್ಧ ಕ್ರಮ ಜರಗಿಸುತ್ತೇವೆ ಎಂದು ತಾಕೀತು ಮಾಡಿದರು.

ವರದಿ ಬಂದ ಮೇಲೆ ಕ್ರಮ
ದಾವಣಗೆರೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಇನ್‌ಸ್ಪೆಕ್ಟರ್‌, ಪಿಎಸ್‌ಐ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಮರಣೋತ್ತರ ಪರೀಕ್ಷೆ ವರದಿ ಬಂದ ಅನಂತರ ಆದಿಲ್‌ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ತಿಳಿಸಿದರು.

ಹಣಕ್ಕಾಗಿ ಪೀಡಿಸುತ್ತಿದ್ದರು ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತದೆ. ಅಧಿಕಾರಿಗಳು ಆ ರೀತಿ ಭಾಗಿಯಾಗಿರುವುದು ಕಂಡುಬಂದರೆ, ಅಂತಹವರ ವಿರುದ್ಧ ಸೇವೆಯಿಂದ ವಜಾಗೊಳಿಸುವ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Advertisement

ಕರ್ನಾಟಕ ಬಿಹಾರವಾಗುತ್ತಿದೆ ಎಂದ ವಿಜಯೇಂದ್ರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ಹೇಗಿದ್ದಾವೆ ಎಂಬುದನ್ನು ನೋಡಿಕೊಳ್ಳಲಿ. ಗುಜುರಾತ್‌ನಲ್ಲಿ ಬೆಂಕಿಹೊತ್ತಿಕೊಂಡು 27 ಜನ ಸತ್ತಿದ್ದಾರೆ. ಅದಕ್ಕೆ ಯಾರು ಹೊಣೆ? ಅಲ್ಲಿನ ಮುಖ್ಯಮಂತ್ರಿ, ಗೃಹ ಸಚಿವರು ರಾಜೀನಾಮೆ ಕೊಡಬೇಕಲ್ಲವೇ? ಎಂದು ಪ್ರಶ್ನಿಸಿದರು.

ದಾವಣಗೆರೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪದ ಹಿನ್ನೆಲೆ ಇನ್‌ಸ್ಪೆಕ್ಟರ್‌, ಪಿಎಸ್‌ಐನನ್ನು ಅಮಾನತುಗೊಳಿಸಲಾಗಿದೆ. ಅಧಿಕಾರಿಗಳು ಭಾಗಯಾಗಿರುವುದು ಕಂಡುಬಂದರೆ, ಸೇವೆಯಿಂದ ವಜಾಗೊಳಿಸಲಾಗುವುದು.
– ಡಾ| ಜಿ. ಪರಮೇಶ್ವರ್‌,
ಗೃಹ ಸಚಿವರು.

Advertisement

Udayavani is now on Telegram. Click here to join our channel and stay updated with the latest news.

Next