ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದು ನಮ್ಮ ಗುರಿ. ನನಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ. ಏನೇ ಇದ್ದರೂ ಆಂತರಿಕವಾಗಿ ನಮ್ಮ ನಾಯಕರ ಮುಂದೆ ಹೇಳಿಕೊಳ್ಳುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಪ್ರಣಾಳಿಕೆ ಸಮಿತಿ ಅಧ್ಯಕ್ಷನಾದ ತಮಗೆ ತಿಳಿಸದೇ ಘೋಷಣೆ ಮಾಡುತ್ತಿರುವ ಬಗ್ಗೆ ಅಸಮಾಧಾನಗೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರಬಹುದು. ಅದನ್ನೇ ದೊಡ್ಡದು ಮಾಡುವ ಅಗತ್ಯವಿಲ್ಲ ಎಂದರು.
ಸುರ್ಜೇವಾಲಾ ಅವರ ಜತೆ ಮಹತ್ವದ ಮಾತುಕತೆ ನಡೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಗುರಿ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ಎಂದು ಹೇಳಿದರು.
ರಾಜೀನಾಮೆ ನೀಡಿಲ್ಲ: ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಡಾ.ಜಿ.ಪರಮೇಶ್ವರ್ ನಮ್ಮ ಪಕ್ಷದ ಆಸ್ತಿ. ಸುದೀರ್ಘ ಕಾಲ ಪಕ್ಷದ ಅಧ್ಯಕ್ಷರಾಗಿದ್ದವರು. ಅವರು ಬೇಸರಪಟ್ಟುಕೊಳ್ಳುವಂತೆ ನಾವು ಯಾರೂ ನಡೆದುಕೊಳ್ಳುವುದಿಲ್ಲ. ಅವರು ರಾಜೀನಾಮೆ ನೀಡಿಲ್ಲ, ಎಲ್ಲವೂ ಊಹಾಪೋಹ ಎಂದು ಹೇಳಿದರು.
Related Articles
ಬೆಂಗಳೂರಿಗೆ ವಿಶೇಷವಾದ ಸಂಚಾರ ನಿರ್ವಹಣಾ ವ್ಯವಸ್ಥೆ ತರಬೇಕಿದೆ. ಇದೇ ವಿಚಾರದಲ್ಲಿ ಪರಮೇಶ್ವರ್ ಜತೆ ಸುರ್ಜೇವಾಲಾಮಾತನಾಡಿದ್ದಾರೆ. ಪರಮೇಶ್ವರ್ ನೇತೃತ್ವದಲ್ಲಿಒಂದು ತಂಡ ಸಿಂಗಾಪುರಕ್ಕೆ ಹೋಗಿ ಬರಲಿದೆ ಎಂದು ತಿಳಿಸಿದರು.
ಭಾವಚಿತ್ರ ಹಾಕದ್ದಕ್ಕೆ ಬೇಸರ?: ಮೂಲಗಳ ಪ್ರಕಾರ ಡಾ.ಜಿ.ಪರಮೇಶ್ವರ್ ಪಕ್ಷದ ವತಿಯಿಂದ ನೀಡುವ ಜಾಹೀರಾತುಗಳಲ್ಲಿ ತಮ್ಮ ಭಾವಚಿತ್ರ ಹಾಕದ ಬಗ್ಗೆ ಬೇಸರಗೊಂಡಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಸುರ್ಜೇವಾಲ ಅವರಿಗೆ ದೂರು ನೀಡಿದ್ದಾರೆ. ಆದರೆ, ಆ ಬಗ್ಗೆ ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ನಾಯಕರು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.