Advertisement

ಕಮಿಷನ್ ಪಡೆದಿರುವುದು ಬಿಜೆಪಿಯೋ ಕಾಂಗ್ರೆಸ್ಸೋ ಎಂದು ತನಿಖೆಯಿಂದ ಗೊತ್ತಾಗಲಿದೆ : ಪರಮೇಶ್ವರ್

08:53 AM Aug 28, 2022 | Team Udayavani |

ಹುಬ್ಬಳ್ಳಿ : ಗುತ್ತಿಗೆದಾರರ ಸಂಘದ ಕೆಂಪಣ್ಣ ಅವರು ಕಾಂಗ್ರೆಸ್ ನಿಂದ ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸುವ ಸರಕಾರವು ಆ ಬಗ್ಗೆ ತನಿಖೆ ನಡೆಸಲಿ.‌ ಆಗ ಯಾರು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗುತ್ತದೆ. ಹೇಗಿದ್ದರೂ ರಾಜ್ಯದಲ್ಲಿ ಬಿಜೆಪಿಯದ್ದೇ ಸರಕಾರವಿದೆ ಎಂದು ಕಾಂಗ್ರೆಸ್ ಶಾಸಕ ಡಾ. ಜಿ. ಪರಮೇಶ್ವರ ಹೇಳಿದರು.

Advertisement

ರವಿಬಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುವುದಾದರೆ ಆ ಬಗ್ಗೆ ಸರಕಾರ ತನಿಖೆ ಮಾಡಲಿ. ಆಗ ಬಿಜೆಪಿಯವರು ತಗೊಂಡಿದ್ದಾರೊ ಅಥವಾ ನಾವು ಪಡೆದಿದ್ದೇವೋ ಗೊತ್ತಾಗುತ್ತದೆ ಎಂದು ಸವಾಲು ಹಾಕಿದರು.

ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಸಂಘ (ರುಪ್ಸಾ) ಸಹ ಪ್ರಧಾನಿಗೆ ಪತ್ರ ಬರೆದಿದೆ. ಆ ಮೂಲಕ ಈ ಸರಕಾರವು ಇಲಾಖಾವಾರು ನಡೆಸುತ್ತಿರುವ ಭ್ರಷ್ಟಾಚಾರವು ಜಗಜ್ಜಾಹೀರಾಗುತ್ತಿದೆ. ಮುಂದೆ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ಇಂತಹ ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಲಾಗುವುದು ಎಂದರು.

ಇದನ್ನೂ ಓದಿ : ಮಂಗಳೂರು : ಪ್ರಧಾನಿಯ ನಿರೀಕ್ಷೆಯಲ್ಲಿ ಎಂಆರ್‌ಪಿಎಲ್‌, ಎನ್‌ಎಂಪಿಎ ಯೋಜನೆಗಳು

ಇತಿಹಾಸದ ಪಕ್ಷದಲ್ಲಿ ಇದು ಸಾಮಾನ್ಯ:
137 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ನಲ್ಲಿ ಹಲವು ನಾಯಕರು ಪಕ್ಷ ತೊರೆದಿದ್ದಾರೆ ಮತ್ತು ಒಡಕು ಮಾಡಿದದ್ದಾರೆ. ಅದಕ್ಕೆ ಈಗ ಗುಲಾಂ ನಬಿ ಆಜಾದ್ ಸಹ ಸೇರಿದ್ದಾರೆ. ಇಂತಹ ಬೆಳವಣಿಗೆಗಳು ಪಲ್ಷದಲ್ಲಿ ನಡೆಯುತ್ತಲೇ ಇರುತ್ತವೆ. ಇಲ್ಲಿಂದ ಬೇರೆ ಪಕ್ಷಕ್ಕೆ ಹೋದವರು ಅಲ್ಲಿ ದೊಡ್ಡ ನಾಯಕರಾಗಿದ್ದಾರೆ. ಇವೆಲ್ಲದರ ನಡುವೆಯೂ ಪಕ್ಷ ಉಳಿದಿದೆ. ಹೊಸ ನಾಯಕತ್ವ ಹುಟ್ಟಿಕೊಳ್ಳುತ್ತಲೇ ಇರುತ್ತದೆ. ದೇಶದ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರಿದ್ದು, ಅವರೇ ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Advertisement

ಈ ಸಂದರ್ಭದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮುಖಂಡರಾದ ಸದಾನಂದ ಡಂಗನವರ, ಅನ್ವರ ಮುಧೋಳ, ರಾಜಶೇಖರ ಮೆಣಸಿನಕಾಯಿ, ಮೋಹನ ಅಸುಂಡಿ, ಪಾರಸಮಲ್ ಜೈನ, ದೇವಕಿ ಯೋಗಾನಂದ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next