ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆದ ಜಿ-20 ಶೃಂಗಸಭೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ.
ಈ ಯಶಸ್ಸಿನ ಹಿಂದೆ ದೆಹಲಿ ಪೊಲೀಸರ ಪಾತ್ರವೂ ದೊಡ್ಡದಿದೆ. ಈ ಸರಣಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ಜಿ 20 ನಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸುವ ಪೊಲೀಸರೊಂದಿಗೆ ಭೋಜನ ಸೇವಿಸಲಿದ್ದಾರೆ.
G20 ಶೃಂಗಸಭೆಯನ್ನು ಯಶಸ್ವಿಗೊಳಿಸುವಲ್ಲಿ ಭಾಗವಹಿಸಿದ ಪ್ರತಿಯೊಬ್ಬರ ಕೊಡುಗೆಯನ್ನು ಗುರುತಿಸುವ ಪ್ರಯತ್ನದಲ್ಲಿ, ಪ್ರಧಾನಿ ನರೇಂದ್ರ ಮೋದಿ ಕಾರ್ಯನಿರ್ವಹಿಸುತ್ತಿದ್ದು ಆ ನಿಟ್ಟಿನಲ್ಲಿ ಯಶಸ್ಸಿನ ಹಿಂದೆ ಮಹತ್ತರ ಪಾತ್ರ ವಹಿಸಿದ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಪ್ರಧಾನಿ ಭೋಜನ ಸವಿಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಅದರಂತೆ ಕಳೆದ ವಾರಾಂತ್ಯದ ಶೃಂಗಸಭೆಯಲ್ಲಿ ಅತ್ಯುತ್ತಮ ಕೆಲಸ ಮಾಡಿದ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಇನ್ಸ್‌ಪೆಕ್ಟರ್‌ಗಳವರೆಗೆ – ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು ಪ್ರತಿ ಜಿಲ್ಲೆಯಿಂದ ಸಿಬ್ಬಂದಿಗಳ ಪಟ್ಟಿಯನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಟ್ಟಿಯಲ್ಲಿ ಸುಮಾರು 450 ಸಿಬ್ಬಂದಿ ಹೆಸರು ಇರಬಹುದೆಂದು ನಿರೀಕ್ಷಿಸಲಾಗಿದ್ದು ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರೊಂದಿಗೆ G20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ ಪ್ರಧಾನ ಮಂತ್ರಿಯೊಂದಿಗೆ ಭೋಜನವನ್ನು ಸೇವಿಸುವ ಸಾಧ್ಯತೆಯಿದೆ.
ಪ್ರಮುಖ ಸಾಧನೆಯಲ್ಲಿ ತೊಡಗಿರುವ ಜನರ ಶ್ರಮವನ್ನು ಪ್ರಧಾನಿ ಮೋದಿ ಗುರುತಿಸುತ್ತಿರುವುದು ಇದೇ ಮೊದಲಲ್ಲ. ಮೇ ತಿಂಗಳಲ್ಲಿ, ಹೊಸ ಸಂಸತ್ ಭವನದ ಉದ್ಘಾಟನೆಗೆ ಮುನ್ನ, ಅದರ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರನ್ನು ಸನ್ಮಾನಿಸಿರುವುದನ್ನೂ ನೆಳಪಿಸಿಕೊಳ್ಳಬಹುದು.
ಇದನ್ನೂ ಓದಿ: Money Laundering Case: ಬಿಹಾರದ ಜೆಡಿಯು ನಾಯಕನನ್ನು ಬಂಧಿಸಿದ ಜಾರಿ ನಿರ್ದೇಶನಾಲಯ