Advertisement

ಗಾಳಿಪಟ-2 ಹಾರಾಟ ಬಲು ಜೋರು

10:00 AM Dec 30, 2019 | Lakshmi GovindaRaj |

ಯೋಗರಾಜ್‌ ಭಟ್‌ ನಿರ್ದೇಶನದ “ಗಾಳಿಪಟ-2′ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಕೆಲ ದಿನಗಳ ಹಿಂದಷ್ಟೇ ಸದ್ದಿಲ್ಲದೆ “ಗಾಳಿಪಟ-2′ ಚಿತ್ರದ ಚಿತ್ರೀಕರಣವನ್ನು ಆರಂಭಿಸಿದ್ದ ನಿರ್ದೇಶಕ ಯೋಗರಾಜ್‌ ಭಟ್‌ ಆ್ಯಂಡ್‌ ಟೀಮ್‌ ಸದ್ಯ ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ.

Advertisement

ಇನ್ನು “ಗಾಳಿಪಟ-2′ ಚಿತ್ರದ ಚಿತ್ರೀಕರಣದಲ್ಲಿ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌, ಹಿರಿಯ ನಟ ಅನಂತನಾಗ್‌, ರಂಗಾಯಣ ರಘು, ಪದ್ಮಜಾ ರಾವ್‌, ಸುಧಾ ಬೆಳವಾಡಿ, ಪವನ್‌ ಕುಮಾರ್‌ ಸೇರಿದಂತೆ ಹಲವು ಕಲಾವಿದರು ಭಾಗಿಯಾಗುತ್ತಿದ್ದಾರೆ. ಇತ್ತೀಚೆಗೆ ನಟಿ ಪದ್ಮಜಾ ರಾವ್‌ “ಗಾಳಿಪಟ-2′ ಚಿತ್ರದ ಚಿತ್ರೀಕರಣದ ಕೆಲವು ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಚಿತ್ರದ ಚಿತ್ರೀಕರಣದ ಅನುಭವಗಳನ್ನು ತೆರೆದಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next