Advertisement

ಜು.14 ಕ್ಕೆ  ಗಾಳಿಪಟ-2 ಎಣ್ಣೆ ಸಾಂಗ್‌ ರಿಲೀಸ್

02:19 PM Jul 13, 2022 | Team Udayavani |

ಗಣೇಶ್‌ ನಾಯಕರಾಗಿರುವ, ಯೋಗರಾಜ್‌ ಭಟ್‌ ನಿರ್ದೇಶನದ “ಗಾಳಿಪಟ-2′ ಚಿತ್ರ ಆಗಸ್ಟ್‌ 12ಕ್ಕೆ ಬಿಡುಗಡೆಯಾಗುತ್ತಿದೆ. ‌

Advertisement

ಅದಕ್ಕೂ ಮೊದಲು ಚಿತ್ರ ಹಾಡಿನ ಮೂಲಕ ಮೋಡಿ ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಹಿಟ್‌ಲಿಸ್ಟ್‌ ಸೇರಿದೆ. ಈಗ ಚಿತ್ರದ ಮತ್ತೂಂದು ಹಾಡು ಬಿಡುಗಡೆಯಾಗುತ್ತಿ ದೆ. ಅದು ಎಣ್ಣೆ ಹಾಡು!

ಈಗಾಗಲೇ ಭಟ್ಟರು ಬರೆದಿರುವ ಅನೇಕ ಎಣ್ಣೆ ಹಾಡುಗಳು ಹಿಟ್‌ಲಿಸ್ಟ್‌ ಸೇರಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್‌ ಪ್ರಕಾಶ್‌ ಹಾಗೂ ಸಂಗೀತ ನೀಡಿರುವವರು ಅರ್ಜುನ್‌ ಜನ್ಯ.

ಈಗ ಈ ಮೂವರ ಕಾಂಬಿನೇಶನ್‌ನಲ್ಲಿ ಗಾಳಿಪಟ 2 ಚಿತ್ರದ ಮತ್ತೂಂದು ಎಣ್ಣೆ ಸಾಂಗ್‌ ಜುಲೈ 14 ರಂದು ಆನಂದ್‌ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಸೂರಜ್‌ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್‌ ರೆಡ್ಡಿ ಅವರು ಗಾಳಿಪಟ 2 ಚಿತ್ರವನ್ನು ನಿರ್ಮಿಸಿದ್ದಾರೆ. ಅದ್ಧೂರಿ ಬಜೆಟ್‌ನಲ್ಲಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌, ದಿಗಂತ್‌, ಪವನ್‌ ಕುಮಾರ್‌, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next