ಗದಗ: ರಾಜ್ಯ ಸರ್ಕಾರ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಯನ್ನು ಕೇವಲ 3 ರೂ. ಹೆಚ್ಚಿಸಿದ್ದಕ್ಕೆ ಬೀದಿಗಿಳಿದು ಹೋರಾಟ
ಮಾಡುತ್ತಿರುವ ರಾಜ್ಯದ ಬಿಜೆಪಿ ನಾಯಕರು, ಮನಮೋಹನಸಿಂಗ್ ಸರ್ಕಾರ ಇದ್ದಾಗ 65 ರೂ. ಇದ್ದ ಪೆಟ್ರೋಲ್ ದರ 100 ರೂ., 450 ರೂ. ಇದ್ದ ಅಡುಗೆ ಸಿಲಿಂಡರ್ ಬೆಲೆ 1,000 ರೂಪಾಯಿ ದಾಟಿದಾಗ ಇವರ ಧ್ವನಿ, ಹೋರಾಟ, ಬಡವರ ಬಗೆಗಿನ ಕಾಳಜಿ ಎಲ್ಲಿಗೆ ಹೋಗಿತ್ತು ಎಂದು ವಿಪ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರಶ್ನಿಸಿದರು.
Advertisement
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಸ್ಥಾನ ಗೆಲ್ಲಲಾಗಲಿಲ್ಲ. ಆದರೆ 1ರಿಂದ 9 ಸ್ಥಾನ ಗೆದ್ದಿದ್ದೇವೆ. ಕಳೆದ ಬಾರಿಗಿಂತಲೂ ಪಕ್ಷದ ಮತಪ್ರಮಾಣ ಹೆಚ್ಚಿದೆ. ಇದರ ಮಧ್ಯೆಹಾವೇರಿ, ಚಿತ್ರದುರ್ಗ, ಬೆಂಗಳೂರು ಕೇಂದ್ರ ಸೇರಿ ಕೆಲವು ಕ್ಷೇತ್ರಗಳಲ್ಲಿ ಕಡಿಮೆ ಅಂತರದಿಂದ ಸೋತಿದ್ದೇವೆ. ಧಾರವಾಡದಲ್ಲಂತೂ ಜೋಶಿಯವರು ಗೆದ್ದು ಸೋತಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಅಸೂಟಿ ಅವರು ಸೋತು ಗೆದ್ದಿದ್ದಾರೆ ಎಂದರು.
ಮುಂಬರುವ ಚನ್ನಪಟ್ಟಣ, ಬಳ್ಳಾರಿ ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತರ ಪಕ್ಷದ
ಸಂಘಟನೆ, ಬೂತ್ ಕಮಿಟಿ ಕುರಿತು ಚರ್ಚೆ ನಡೆಯುತ್ತಿದೆ. ಇದಕ್ಕಾಗಿ ಸಮಿತಿ ಕೂಡ ರಚನೆಯಾಗಿದೆ. ಚುನಾವಣೆಯಲ್ಲಿ ಅಭ್ಯರ್ಥಿ
ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಮುಖಂಡರಾದ ಎಸ್.ಡಿ. ಮಕಾಂದಾರ, ಕೆ.ಎಂ. ಸೈಯ್ಯದ, ಹುಮಾಯೂನ್ ಮಾಗಡಿ ಸೇರಿ ಹಲವರಿದ್ದರು.
Related Articles
ದೇಶದಲ್ಲಿ ಹತ್ತು ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿಗೆ 18 ನೇ ಲೋಕಸಭಾ ಚುನಾವಣೆಯಲ್ಲಿ ದೇಶದ ಜನರು ಬಿಜೆಪಿಗೆ ಕೇವಲ 240 ಸ್ಥಾನಕ್ಕೆ ಇಳಿಸುವ ಮೂಲಕ ದುರಹಂಕಾರಿ ಸರ್ಕಾರಕ್ಕೆ ಸಂದೇಶ ನೀಡಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಕ್ಕಪಾಠ ಕಲಿಸಿದ್ದಾರೆ. ಜತೆಗೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ ಎನ್ನುತ್ತಿದ್ದವರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂಬುದನ್ನು ಇದು ತೋರಿಸುತ್ತಿದೆ. ಸಂವಿಧಾನ ಬದಲಾವಣೆ ಮಾಡಲು ಹುನ್ನಾರ ಮಾಡಿದ್ದ ಅವರಿಗೆ ಜನರು ತಕ್ಕಪಾಠ ಕಲಿಸುವ ಮೂಲಕ ಸಂದೇಶ ನೀಡಿದ್ದಾರೆ ಎಂದು ಸಲೀಂ ಅಹ್ಮದ್ ಹೇಳಿದರು.
Advertisement
ರಾಜ್ಯದ ಬಿಜೆಪಿ ನಾಯಕರು, ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತ ಹಗಲುಗನಸು ಕಾಣುತ್ತಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಅ ಧಿಕಾರದ ಚುಕ್ಕಾಣಿ ಹಿಡಿದಿರುವ ಎನ್‌ಡಿಎ ಸರ್ಕಾರ ಕಿಚಡಿ ಸರ್ಕಾರವಾಗಿದ್ದು, ಇದಕ್ಕೆ ಆಯುಷ್ಯ ಬಹಳ ಕಡಿಮೆ. ಅದು ಹೆಚ್ಚುದಿನ ಉಳಿಯುವುದಿಲ್ಲ. ಹೀಗಾಗಿ ರಾಜ್ಯದ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರಉಳಿಸಿಕೊಳ್ಳುವತ್ತ ಶ್ರಮಿಸಲಿ.
*ಸಲೀಂ ಅಹ್ಮದ್, ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕ