Advertisement

Karnataka Polls: ಗದಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ-ಮುಖಂಡರ ಜತೆ ಚರ್ಚೆ

10:55 AM Apr 30, 2023 | Team Udayavani |

ಗದಗ: ಸಿಎಂ ಬಸವರಾಜ ಬಿಮ್ಮಾಯಿ ಅವರು ಗದುಗಿಗೆ ಭೇಟಿ ನೀಡಿ ಗದಗ ಕ್ಷೇತ್ರದ ಅಭ್ಯರ್ಥಿ ಅನೀಲ ಮೆಣಸಿನಕಾಯಿ ಸೇರಿ ಸ್ಥಳೀಯ ಮುಖಂಡರ ಜತೆ ಚುನಾವಣೆ ತಯಾರಿ ಬಗ್ಗೆ ಚರ್ಚಿಸಿದ್ದಾರೆ.

Advertisement

ಶನಿವಾರ ವಿಜಯನಗರ ಜಿಲ್ಲೆಯಲ್ಲಿ ಪ್ರಚಾರ ಮುಗಿಸಿಕೊಂಡು, ಮಾರ್ಗ ಮಧ್ಯೆ ಶಿರಹಟ್ಟಿ ಕ್ಷೇತ್ರ ವ್ಯಾಪ್ತಿಯ ಮುಂಡರಗಿಯಲ್ಲಿ ಅಲ್ಲಿನ ಬಿಜೆಪಿ ಮುಖಂಡರ ಜತೆ ಚರ್ಚೆ ನಡೆಸಿ, ಅಲ್ಲಿಂದ ತಡರಾತ್ರಿ ಗದಗಗೆ ಆಗಮಿಸಿ ಸ್ಥಳೀಯ ಮುಖಂಡರ ಜತೆ ಚರ್ಚಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಧಾನಿಗಳ ಕಾರ್ಯಕ್ರಮ ಮುಗಿಸಿ ಬೀದರ್ ನಿಂದ ಬಳ್ಳಾರಿ ಜಿಲ್ಲೆಯಲ್ಲಿದ್ದೆ‌‌. ವಿಜಯನಗರ ಜಿಲ್ಲೆಯಲ್ಲಿ ಪ್ರಚಾರ ಮುಗಿಸಿ ಹುಬ್ಬಳ್ಳಿಗೆ ಹೊರಟಿದ್ದೆ. ಮಾರ್ಗ ಮಧ್ಯೆ ಮುಂಡರಗಿ, ಗದಗ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದೇನೆ. ಈ ಭೇಟಿಗೆ ವಿಶೇಷ ಅರ್ಥ ಏನಿಲ್ಲ.

ಶಿರಹಟ್ಟಿ, ಗದಗ ಕ್ಷೇತ್ರದ ಏನೆಲ್ಲ ನಡೆದಿದೆ ಎಂದು ತಿಳಿದುಕೊಂಡು, ಸಲಹೆ ಸೂಚನೆ ಕೊಡಲು ಬಂದಿದ್ದೇನೆ. ರಾಜ್ಯದ ಮುಖ್ಯಮಂತ್ರಿಯಾಗಿ 224 ಕ್ಷೇತ್ರ ಕಾಳಜಿ ಮಾಡುತ್ತೇನೆ. ಅದರಂತೆ ಗದಗನ್ನೂ ಕಾಳಜಿ ಮಾಡುತ್ತೇನೆ ಎಂದರು.

ಭ್ರಷ್ಟಾಚಾರ ಆರೋಪ ಮಾಡುವ ಕಾಂಗ್ರೆಸ್, ಒಂದು ಕೇಸ್ ತೋರಿಸಲಿ ಎಂದು ಸವಾಲು ಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್ ತನ್ನ ಮೇಲಿನ 60 ಕೇಸ್ ಗಳನ್ನು ಎಸಿಬಿಯಲ್ಲಿ ಮುಚ್ಚಿಹಾಕಿದ್ದರು. ಇದರಲ್ಲಿ ಸಿದ್ದರಾಮಯ್ಯನವರದೂ ಇದೆ. ತನಿಖೆ ಮಾಡದೇ ಬಿ-ರಿಪೋರ್ಟ್ ಕೊಟ್ಟು ಮುಚ್ಚಿಹಾಕಿದ್ದರು. ಆ ಎಲ್ಲ ಕೇಸ್ ಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೇನೆ.

Advertisement

ಎಸಿಬಿ ಮಾಡಿದ್ದೇ ಕೇಸ್ ಮುಚ್ಚಿಹಾಕುಲು ಅಂತಾ ಸ್ವತಃ ಹೈಕೋರ್ಟ್ ಹೇಳಿದೆ ಎಂದ ಅವರು, ಲೋಕಾಯುಕ್ತವನ್ನು ದುರ್ಬಲಗೊಳಿಸಿದ ಕುಖ್ಯಾತಿ, ವಿಲನ್ ಸಿದ್ದರಾಮಯ್ಯನವರಿಗೆ ಮತ್ತು ಅಂದಿನ ಅವರ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಟಾಂಗ್ ನೀಡಿದರು.

ಕಾಂಗ್ರೆಸ್ ಐದು ಬಿಟ್ಟು 50 ಗ್ಯಾರಂಟಿ ಘೋಷಣೆ ಮಾಡಲಿ. ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಮೇ 10 ರವರೆಗೆ ಮಾತ್ರ ಗ್ಯಾರಂಟಿ.

ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಮೇಲೆ ಕಲ್ಲು ಎಸೆದ ಪ್ರಕರಣದ ಬಗ್ಗೆ ತನಿಖೆಯಾಗಲಿ. ಚುನಾವಣೆ ಆಯೋಗವೂ ಗಮನಿಸುತ್ತದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಯಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಗದಗ ವಿಧಾನ ಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಲ ಮೆಣಸಿನಕಾಯಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸೇರಿ ಅನೇಕರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next