Advertisement
ಕಳೆದ ಮೂರು ವರ್ಷಗಳಿಂದ ಪ್ರವಾಹ ಹಾಗೂ ಕೊರೊನಾ ಕಾರಣಗಳಿಂದಾಗಿ ಲಕ್ಕುಂಡಿ ಉತ್ಸವ ಜರುಗಿಸಲು ಸಾಧ್ಯವಾಗಿಲ್ಲ. ಈ ಭಾರಿ ಅರ್ಥಪೂರ್ಣವಾಗಿ ಎರಡು ದಿನಗಳ ಲಕ್ಕುಂಡಿ ಉತ್ಸವ ಜರುಗಿಸಲು ತೀರ್ಮಾನಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮಸ್ಥರ ಅಭಿಪ್ರಾಯ ಪಡೆದುಕೊಳ್ಳಲು ಈ ಸಭೆ ಆಯೋಜಿಸಲಾಗಿದೆ ಎಂದರು.
ಸೂಚಿಸಿದರು. ಲಕ್ಕುಂಡಿ ಉತ್ಸವದ ಯಶಸ್ವಿಗೆ ಗ್ರಾಮಸ್ಥರ ಸಹಕಾರವು ಅಗತ್ಯವಿದ್ದು, ಲಕ್ಕುಂಡಿ ಉತ್ಸವವನ್ನು ಊರ ಹಬ್ಬವನ್ನಾಗಿ ಆಚರಿಸಲು ಗ್ರಾಮಸ್ಥರು ಮುಂದಾಗಬೇಕು. ಉತ್ಸವದ ಯಶಸ್ವಿಗಾಗಿ ಅಗತ್ಯದ ಸಮಿತಿಗಳನ್ನು ರಚಿಸಿ ಫೆ. 11 ಹಾಗೂ 12ರಂದು ಜರುಗುವ ದಾನಚಿಂತಾಮಣಿ ಅತ್ತಿಮಬ್ಬೆಯ ಕೀರ್ತಿಯನ್ನು ರಾಷ್ಟ್ರಾದ್ಯಂತ ಪಸರಿಸಲು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಸಚಿವ ಸಿ.ಸಿ. ಪಾಟೀಲ ಹೇಳಿದರು.
Related Articles
Advertisement
ನಂತರ ಸಭೆಯಲ್ಲಿ ಗ್ರಾಮಸ್ಥರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸಭೆಯಲ್ಲಿ ಲಕ್ಕುಂಡಿ ಗ್ರಾಪಂ ಅಧ್ಯಕ್ಷೆ ಲಲಿತಾ ಗದಗಿನ, ಉಪಾಧ್ಯಕ್ಷ ಸಿದ್ದು ಮುಳಗುಂದ, ಗ್ರಾಮ ಪಂಚಾಯತ್ ಸದಸ್ಯರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಪಲ್ಲೇದ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಜಿಪಂ ಸಿಇಒ ಡಾ| ಸುಶೀಲಾ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ., ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು, ಲಕ್ಕುಂಡಿ ಗ್ರಾಮದ ಗಣ್ಯರು, ಸಾರ್ವಜನಿಕರು ಹಾಜರಿದ್ದರು.