Advertisement

Gadag: ಬೀದಿ ಬದಿ ವ್ಯಾಪಾರಸ್ಥರಿಗೆ ಹೈಟೆಕ್‌ ತಳ್ಳು ಗಾಡಿ ಭಾಗ್ಯ

06:02 PM Nov 20, 2023 | Team Udayavani |

ಗದಗ: ಬೀದಿ ಬದಿ ವ್ಯಾಪಾಸ್ಥರು ಸ್ವಾಭಿಮಾನದಿಂದ ತಮ್ಮ ಬದುಕು ಸಾಗಿಸಲು ಅನುಕೂಲವಾಗುವಂತೆ ಹೈಟೆಕ್‌ ತಳ್ಳು ಗಾಡಿಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

Advertisement

ನಗರದ ಕೆ.ಎಚ್‌. ಪಾಟೀಲ ವೃತ್ತದಲ್ಲಿ ಬೀದಿ ಬದಿ ವ್ಯಾಪರಸ್ಥರಿಗೆ ಹೈಟೆಕ್‌ ತಳ್ಳು ಗಾಡಿಗಳನ್ನು ವಿತರಿಸಿ ಅವರು ಮಾತನಾಡಿದರು.

ಶತಮಾನಗಳಿಂದ ಸಮಾಜದಲ್ಲಿ ಬಡಜನರನ್ನು ಅಸೂಯೆ ಭಾವನೆಯಿಂದ ನೋಡಲಾಗುತ್ತಿತ್ತು. ಇಂದಿರಾ ಗಾಂಧಿ ಅವರು ಬಡಜನರನ್ನು  ಸ್ವಾಭಿಮಾನಿಗಳನ್ನಾಗಿಸುವ ದಿಸೆಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತದಂತಹ  ಧೀಮಂತ ಮಹಿಳೆ. ಅವರ ಜನ್ಮದಿನವಾದ ಇಂದು ಬೀದಿ ಬದಿ ವ್ಯಾಪಾರಸ್ಥರಿಗೆ ಹೈಟೆಕ್‌ ತಳ್ಳು ಗಾಡಿಗಳನ್ನು ವಿತರಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಸ್ಥರಿಗೆ ಸರ್ಕಾರದ ಸೌಲಭ್ಯಗಳನ್ನು ವಿತರಿಸುವಲ್ಲಿ ಜಿಲ್ಲೆ ಒಂದು ಹೆಜ್ಜೆ ಮುಂದೆ ಇದೆ. ಆದ್ದರಿಂದ, ಇದರ
ಸಂಪೂರ್ಣ ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ತಿಳಿಸಿದರು. ಇಂದು ನಗರದ 145 ಬೀದಿ ಬದಿ ವ್ಯಾಪಾರಸ್ಥರಿಗೆ ಹೈಟೆಕ್‌ ತಳ್ಳು ಗಾಡಿಗಳನ್ನು ವಿತರಿಸಲಾಗಿದ್ದು, ಬಾಕಿ ಫಲಾನುಭವಿಗಳಿಗೆ ಬರುವ ಜನವರಿ ಅಂತ್ಯದೊಳಗಾಗಿ ವಿತರಿಸಲಾಗುವುದು ಎಂದು ತಿಳಿಸಿದರು.

ಇದರ ಜೊತೆಗೆ ಬೀದಿ ಬದಿ ವ್ಯಾಪಾರಸ್ಥರ ಅನುಕೂಲಕ್ಕಾಗಿ ನಗರದಲ್ಲಿ ಕೋಲ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣಕ್ಕೆ ಸಂಬಂಧಿಸಿದ
ಮನವಿಗೆ ಸ್ಪಂದಿಸಿ, ಜನವರಿ 19ರೊಳಗಾಗಿ ಕೋಲ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಮಾಡಲಾಗುವುದು ಎಂದು ಸಚಿವರು ಬೀದಿ ಬದಿ ವ್ಯಾಪಾರಸ್ಥರಿಗೆ ಭರವಸೆ ನೀಡಿದರು.

Advertisement

ಈ ವೇಳೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌. ನೇಮಗೌಡ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಮೇಶ ವಟಗಲ್‌, ಮಾಜಿ ಶಾಸಕ ಡಿ.ಆರ್‌. ಪಾಟೀಲ, ನಗರಸಭೆ ಸದಸ್ಯರು, ಗದಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ವಿವಿಧೋದ್ದೇಶಗಳ ಸಂಘದ ಪದಾಧಿಕಾರಿಗಳು, ಗಣ್ಯರು, ಸಾರ್ವಜನಿಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next