ಗದಗ: ಶಿವಮೊಗ್ಗದ ಡಾ| ಪುಟ್ಟರಾಜ ಗವಾಯಿಗಳ ಉಚಿತ ಸಂಗೀತ ಹಾಗೂ ಸಂಸ್ಕೃತ ಪಾಠಶಾಲೆಗೆ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ ನೀಡಿರುವ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ಕಾರ್ಯ ಅಭಿನಂದನೀಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ| ಡಿ.ವಿ. ಪರಮಶಿವಮೂರ್ತಿ ಹೇಳಿದರು.
Advertisement
ನಗರದ ತೋಂಟದಾರ್ಯ ಮಠದಲ್ಲಿ ಬಸವ ಜಯಂತಿ ಅಂಗವಾಗಿ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ವತಿಯಿಂದ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಮೊಗ್ಗದ ಡಾ| ಪುಟ್ಟರಾಜ ಗವಾಯಿಗಳ ಉಚಿತ ಸಂಗೀತ ಹಾಗೂ ಸಂಸ್ಕೃತ ಪಾಠಶಾಲೆಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಇಲ್ಲವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ರಾಗ-ದ್ವೇಷಗಳಿಲ್ಲದ ಸಮಾಜ ನಿರ್ಮಾಣವಾಗಬೇಕಾದರೆ ಬಸವತತ್ವಗಳು
ಅತ್ಯವಶ್ಯವಾಗಿವೆ ಎಂದರು.
Related Articles
Advertisement
ಈ ಬಾರಿ ಡಾ| ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಮಾರ್ಗದರ್ಶನದ ಮೇರೆಗೆ ಶಿವಮೊಗ್ಗದ ಪುಟ್ಟರಾಜ ಗವಾಯಿಗಳ ಉಚಿತ ಸಂಗೀತ ಪಾಠಶಾಲೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ನಿಸ್ವಾರ್ಥ ಸೇವಾ ಮನೋಭಾವದಿಂದ ಸಮಾಜಕ್ಕೆ ಅರ್ಪಿತವಾದ ಸಂಸ್ಥೆಯೊಂದಕ್ಕೆ ಪ್ರಶಸ್ತಿ ನೀಡುತ್ತಿರುವುದು ತೃಪ್ತಿ ತಂದಿದೆ ಎಂದರು.
ಶಿವಮೊಗ್ಗದ ಡಾ| ಪುಟ್ಟರಾಜ ಕವಿ ಗವಾಯಿಗಳ ಉಚಿತ ಸಂಗೀತ ಮತ್ತು ಸಂಸ್ಕೃತ ಪಾಠಶಾಲೆಯ ಸಂಸ್ಥಾಪಕ ಆರ್.ಬಿ. ಸಂಗಮೇಶ್ವರ ಗವಾಯಿಗಳು ಮಾತನಾಡಿ, ಪುಟ್ಟರಾಜ ಗವಾಯಿಗಳ ಪ್ರೇರಣೆಯಿಂದ ಆಶ್ರಮ ಸ್ಥಾಪಿಸಿದ ಬಗೆಯನ್ನುವಿವರಿಸಿದರು. ಡಾ| ಶಿವಾನಂದ ವಿರಕ್ತಮಠ ರಚಿಸಿದ “ಪ್ರೌಢದೇವರಾಯನ ಕಾಲದ ಕನ್ನಡ ಸಾಹಿತ್ಯ’ ಲೋಕಾರ್ಪಣೆಗೊಂಡಿತು. ಹಂಪಿ ಕನ್ನಡ
ವಿಶ್ವವಿದ್ಯಾಯದ ಹಸ್ತಪ್ರತಿ ವಿಭಾಗದ ಮುಖ್ಯಸ್ಥ ಡಾ| ಕೆ. ರವೀಂದ್ರನಾಥ ಗ್ರಂಥ ಲೋಕಾರ್ಪಣೆ ಮಾಡಿ ಗ್ರಂಥದ ವೈಶಿಷ್ಟ್ಯ ಗಳ ಕುರಿತು ಮಾತನಾಡಿದರು. ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಆಶೀರ್ವಚನ ನೀಡಿದರು. ರೇವಣಸಿದ್ದಯ್ಯ ಮರಿದೇವರಮಠ ಹಾಗೂ ಡಾ| ಪುಟ್ಟರಾಜ ಕವಿ ಗವಾಯಿಗಳ ಉಚಿತ ಸಂಗೀತ ಮತ್ತು ಸಂಸ್ಕೃತ ಪಾಠಶಾಲೆಯ ಅಂಧ ವಿದ್ಯಾರ್ಥಿಗಳಿಂದ ಸಂಗೀತ ಸೇವೆ ನೆರವೇರಿತು. ಸಾಹಿತಿ ಜ್ಯೋತಿರ್ಲಿಂಗ ಹೊನಕಟ್ಟಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪುರ, ಅಮರೇಶ ಅಂಗಡಿ ಸೇರಿ ಹಲವರಿದ್ದರು.