Advertisement

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

02:52 PM Jul 26, 2024 | Team Udayavani |

ಗದಗ: ಯುವಕರಲ್ಲಿ ದೇಶಪ್ರೇಮವನ್ನು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ ಹೇಳಿದರು

Advertisement

ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸತತ 85 ದಿನಗಳ ಹೋರಾಟದ ಫಲವಾಗಿ ಜಯ ಸಾಧಿಸುವ ಮೂಲಕ ಸಂತಸ ಹಾಗೂ ದುಃಖ ಎರಡನ್ನು ಸಮ್ಮಿಳಿತ ಮಾಡಿಕೊಂಡು ಕಾರ್ಗಿಲ್ ವಿಜಯೋತ್ಸವ ಆಚರಿಸಕೊಂಡು ಬರಲಾಗುತ್ತಿದೆ. ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಾಗಬೇಕು, ಸರಕಾರದ ಕಾರ್ಯಕ್ರಮವಾಗಬೇಕು ಎನ್ನುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

1962ರ ಚೈನಾ ಯುದ್ಧ, 1965, 1971ರ ಇಂಡೋ-ಪಾಕ್ ಯುದ್ಧ ಹಾಗೂ 1999ರ ಕಾರ್ಗಿಲ್ ಯುದ್ಧದಲ್ಲಿ ತಮ್ಮ ಪ್ರಾಣ ಅರ್ಪಣೆ ಮಾಡಿದ ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಒಂದು ನಿಮಿಷಗಳ ಕಾಲ ಮೌನಾಚರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

Advertisement

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿದರು. ಶಿವಾನಂದ ಬೃಹನ್ಮಠದ ಅಭಿನವ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಿವಪುತ್ರಪ್ಪ ಸಂಗನಾಳ, ದೇವಪ್ಪ ಡಂಬಳ, ಪ್ರಭುಗೌಡ ಪಾಟೀಲ, ಮಲ್ಲಪ್ಪ ಬ್ಯಾಳಿ, ಮಂಜುನಾಥ ಮುಳಗುಂದ, ವೀರನಾರಿಯರಾದ ಇಂದಿರಾ ಹೆಬಸೂರ, ನಿರ್ಮಲಾ ಹಿರೇಮಠ ಸೇರಿ ಹಲವರು ಇದ್ದರು. ಎನ್ ಸಿಸಿ ಅಧಿಕಾರಿಗಳು, ಕೆಡೆಟ್ ಗಳು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಹಾಜರಿದ್ದರು. ಶೋಭಾ ಹಿರೇಮಠ ಸ್ವಾಗತಿಸಿದರು. ವಿಶ್ವನಾಥ ಕಮ್ಮಾರ ನಿರೂಪಿಸಿದರು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ ನಗರದ ಕಿತ್ತೂರು ಚೆನ್ನಮ್ಮ ವೃತ್ತದಿಂದ ಮುಳಗುಂದ ನಾಕಾ, ಬಸವೇಶ್ವರ ವೃತ್ತ, ಹುಯಿಲಗೋಳ ನಾರಾಯಣರಾವ್ ವೃತ್ತ, ಮಹೇಂದ್ರಕರ್ ವೃತ್ತ, ಮಹಾತ್ಮ ಗಾಂಧಿ ವೃತ್ತ, ಭೂಮರಡ್ಡಿ ವೃತ್ತ ಮಾರ್ಗವಾಗಿ ಕೆ.ಎಚ್. ಪಾಟೀಲ ಸಭಾಭವನದವರೆಗೆ ಮಾಜಿ ಸೈನಿಕರು, ಎನ್ ಸಿಸಿ ಅಧಿಕಾರಿಗಳು, ಕೆಡೆಟ್ಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next