ಗದಗ: ಪ್ರಧಾನಿ ಮೋದಿ ಸಂವಿಧಾನವನ್ನು ಧರ್ಮಗ್ರಂಥ ಎಂದು ಹೇಳಿದ್ದಾರೆ. ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಸಂವಿಧಾನ ಬದಲಾಯಿತ್ತಾರೆಂಬ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
Advertisement
ನಗರದ ಬೆಟಗೇರಿ ಖೋಡೆ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ನಡೆದ ಎಸ್ಸಿ ಸಮಾಜದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಸ್ವಾತಂತ್ರ್ಯ ಹೋರಾಟದ ಮೇಲೆ ಪರಿಣಾಮ ಬೀರಿದರು. ಬ್ರಿಟಿಷರು ಅಂಬೇಡ್ಕರ್ ಮೇಲೆ ಪರಿಣಾಮ ಬೀರುವ ಪ್ರಯತ್ನ ಮಾಡಿದರು.
Related Articles
ಪಾತ್ರವಹಿಸಿದರು. ಬಾಬು ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿ ಮಾಡಿ ಭಾರತವನ್ನು ಸ್ವಾವಲಂಭಿಗಳನ್ನಾಗಿ ಮಾಡಿದರು. ಅದಕ್ಕೂ ಮೊದಲು ಭಾರತ ಬೇರೆ ದೇಶಗಳಲ್ಲಿ ಆಹಾರಕ್ಕಾಗಿ ಭಿಕ್ಷೆ ಬೇಡುತ್ತಿತ್ತು. ಅಮೇರಿಕಾದವರು ದನಗಳಿಗೆ ಹಾಕುವ ಗೋದಿ ಕೊಡುತ್ತಿದ್ದರು ಎಂದು ಹೇಳಿದರು.
Advertisement
ಜಗಜೀವನ್ ರಾಮ್ ಅವರು ಕಾಂಗ್ರೆಸ್‌ನಿಂದ ಹೊರ ಬಂದು ಪಕ್ಷ ಕಟ್ಟಿದರು ಜನತಾ ಪಕ್ಷದೊಂದಿಗೆ ಸೇರಿ ಸರ್ಕಾರದಲ್ಲಿ ಉಪಪ್ರಧಾನಿ ಆದರು. ಅವರನ್ನು ಪ್ರಧಾನಿ ಮಾಡಲು ವಾಜಪೇಯಿಯವರು ಪ್ರಸ್ತಾಪ ಇಟ್ಟರು. ಆದರೆ, ಕಾಂಗ್ರೆಸ್ ಅದಕ್ಕೆ ಅವಕಾಶ ಕೊಡಲಿಲ್ಲ ಎಂದು ಹೇಳಿದರು.
ಮೀಸಲಾತಿ ಹೆಚ್ಚಳ ಕ್ರಾಂತಿಕಾರಕ ನಿರ್ಧಾರ:ರಾಜ್ಯದಲ್ಲಿ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಕಳೆದ ಮೂವತ್ತು ವರ್ಷಗಳಿಂದ ಬೇಡಿಕೆ ಇತ್ತು. ಯಾವ ಸಿಎಂಗಳು ಅದನ್ನು ಮಾಡಲು ಹೋಗಿರಲಿಲ್ಲ. ನಾನು ಮೀಸಲಾತಿ ಹೆಚ್ಚಳ ಮಾಡುವ ಕ್ರಾಂತಿಕಾರಣ ತೀರ್ಮಾನ ಮಾಡಿದೆ ಎಂದು ಹೇಳಿದರು. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಎಸ್. ಆರ್. ಬೊಮ್ಮಾಯಿ ಸಿಎಂ ಆಗಿದ್ದ ಸಂದರ್ಭ ಎಸ್ಸಿ-ಎಸ್ಟಿ ಸಮುದಾಯಕ್ಕೆ ಅನೇಕ ಸೌಲಭ್ಯಗಳನ್ನು ಒದಗಿಸಿರುವುದನ್ನು ನಾವ್ಯಾರು ಮರೆಯಬಾರದು ಎಂದರು. ಆದ್ದರಿಂದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಶಿರಹಟ್ಟಿ ಶಾಸಕ ಡಾ| ಚಂದ್ರು ಲಮಾಣಿ, ವಿಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಮುಖಂಡರಾದ ಅನಿಲ ಮೆಣಸಿನಕಾಯಿ ಶಂಕರ ಮುಳಗುಂದ ಇದ್ದರು.