Advertisement
ಗುರುವಾರ ರಾತ್ರಿ ನಗರದ ಸಂಸದರ ಜನ ಸಂಪರ್ಕ ಕಾರ್ಯಾಲಯದ ಮೂಲಕ ಐಷಾರಾಮಿ ಬಸ್‌ಗಳಲ್ಲಿ ಸುಮಾರು 60 ಕ್ಕೂ ಹೆಚ್ಚು ಜನರನ್ನು ಮೂರು ದಿನಗಳ ಪ್ರವಾಸಕ್ಕೆ ಕರೆದೊಯ್ಯಲಾಗಿದೆ. ಶನಿವಾರ ಬೆಳಗ್ಗೆ ಬೆಂಗಳೂರು ತಲುಪಿರುವ ಬಿಜೆಪಿ ತಂಡ, ಬೆಂಗಳೂರು ಕೆಆರ್‌ಎಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಬೆಳಗ್ಗೆ 9.20 ಕ್ಕೆ ಅಸ್ಸಾಂನ ಗುವಾಹಟಿಗೆ ಪ್ರಯಾಣ ಬೆಳೆಸಿದ್ದಾರೆ. ಅಸ್ಸಾಂನ ಕಾಮಾಕ್ಯ ದೇವಿ ದರ್ಶನ ಪಡೆದಿದ್ದಾರೆ. ಶನಿವಾರ ಮತ್ತು ರವಿವಾರ ಉತ್ತರ ಭಾರತದ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.
ಇತ್ತೀಚೆಗೆ ನಡೆದ ಗದಗ- ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಒಟ್ಟು 35 ವಾರ್ಡ್‌ಗಳ ಪೈಕಿ 18 ಬಿಜೆಪಿ, 15 ಕಾಂಗ್ರೆಸ್ ಹಾಗೂ ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಈ ಪೈಕಿ ಪಕ್ಷೇತರರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ. ಅಲ್ಲದೇ, ಸ್ಥಳೀಯ ಶಾಸಕರ ಮತ ಸೇರಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲ ಸಾಧಿಸಿದಂತಾಗುತ್ತದೆ. ಬಿಜೆಪಿಯಿಂದ ಯಾರಾದರೂ, ಕಾಂಗ್ರೆಸ್ ಪರ ವಾಲಿದರೆ, ಬಿಜೆಪಿಗೆ ಅಧಿಕಾರ ಕೈತಪ್ಪಲಿದೆ ಎಂಬ ಆತಂಕವೂ ಕಾಡುತ್ತಿದೆ.
Related Articles
Advertisement
ಆದರೆ, ನಗರದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದೆ. ಒಮಿಕ್ರಾನ್ ಆತಂಕವೂ ಆವರಿಸುವ ಸಂದರ್ಭದಲ್ಲಿ ನಗರಸಭೆ ಚುನಾಯಿತ ಪ್ರತಿನಿಧಿಗಳು ಹಾಗೂ ಬಿಜೆಪಿ ನಾಯಕರು ಮೋಜು- ಮಸ್ತಿಗಾಗಿ ಪ್ರವಾಸ ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ.