Advertisement

ಜಿಲ್ಲೆಯಲ್ಲಿ ಬೀಜ-ಗೊಬ್ಬರ ದಾಸ್ತಾನು

05:55 PM Apr 10, 2020 | Naveen |

ಗದಗ: ಕೊರೊನಾದಿಂದಾಗಿ ಕೃಷಿ ಚಟುವಟಿಕೆ ನಡೆಸಲು ರೈತ ಬಾಂಧವರಿಗೆ, ರೈತ ಕಾರ್ಮಿಕರಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ಜನರು ತಮ್ಮ ಆರೋಗ್ಯ ರಕ್ಷಣೆಗೆ ಸಾಮಾಜಿಕ ಅಂತರ, ವೈಯಕ್ತಿಕ ಮತ್ತು ಪರಿಸರ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

Advertisement

ಜಿಲ್ಲಾಡಳಿತ ಭವನದ ಜಿ.ಪಂ. ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಏ. 1 ರಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಪ್ರಾರಂಭಿಸಲಾಗಿದೆ. ಆದರೆ ಗದಗ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ದೃಢ ಪಟ್ಟಿರುವುದು ವಿಷಾದದ ಸಂಗತಿ. ಈ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಗಳ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹಾಪ್‌ಕಾಮ್ಸ್‌ ಮಳಿಗೆ ತೆರೆಯುವಂತೆ ಸೂಚಿಸಿದ್ದೇನೆ. ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 47 ಹೆಕ್ಟೆರ್‌ ಪ್ರದೇಶದಷ್ಟು ತೋಟಗಾರಿಕೆ ಬೆಳೆ ನಾಶವಾಗಿದೆ. ಎನ್‌ಡಿಆರ್‌ಎಫ್‌ ನಿಧಿ ಯಡಿ ಪರಿಹಾರ ಒದಗಿಸಲು ಅಗತ್ಯದ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಜಿಪಂ ಅಧ್ಯಕ್ಷ ಸಿದ್ದು ಪಾಟೀಲ, ಶಾಸಕರಾದ ರಾಮಣ್ಣ ಲಮಾಣಿ, ವಿಪ ಸದಸ್ಯ ಎಸ್‌.ವಿ. ಸಂಕನೂರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next