Advertisement

ಗದಗ: ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ರಾಣಿ ಚನ್ನಮ್ಮ

06:07 PM Oct 24, 2024 | Team Udayavani |

■ ಉದಯವಾಣಿ ಸಮಾಚಾರ
ಗದಗ: ಅವಳಿ ನಗರ ಸೇರಿ ಜಿಲ್ಲಾದ್ಯಂತ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗದಗ ಜಿಲ್ಲಾ ಪಂಚಮಸಾಲಿ ಸಮಾಜ, ಪಂಚಮಸಾಲಿ ಯುವ ಘಟಕದ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮ ಅವರ 200ನೇ ವಿಜಯೋತ್ಸವ ಹಾಗೂ 246ನೇ ಜಯಂತ್ಯುತ್ಸವ ಆಚರಿಸಲಾಯಿತು.

Advertisement

ನಗರದ ಜಿಲ್ಲಾಡಳಿತ ಭವನದ ಸಮ್ಮೇಳನ ಸಭಾಂಗಣದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಿಸಲಾಯಿತು. ನರಗುಂದ ಶಾಸಕ ಸಿ.ಸಿ. ಪಾಟೀಲ ಅವರು ವೀರರಾಣಿ ಕಿತ್ತೂರು ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ
ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕºರಸಾಬ್‌ ಬಬರ್ಜಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಭರತ್‌ ಎಸ್‌., ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಸಿದ್ದು ಪಲ್ಲೇದ, ಶರಣ ಪಾಟೀಲ, ಕೃಷ್ಣಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಗಣ್ಯರು, ಹಿರಿಯರು ಹಾಜರಿದ್ದರು.

ಜಿಲ್ಲಾ ಪಂಚಮಸಾಲಿ ಸಮಾಜ ಹಾಗೂ ಯುವ ಘಟಕ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಕಿತ್ತೂರು ಚನ್ನಮ್ಮಾಜೀ 200ನೇ ವಿಜಯೋತ್ಸವ ಹಾಗೂ 246ನೇ ಜಯಂತ್ಯುತ್ಸವ ಜಿಲ್ಲಾ ಪಂಚಮಸಾಲಿ ಸಮಾಜ ಹಾಗೂ ಯುವ ಘಟಕದಿಂದ ನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ನಗರದ ಕಿತ್ತೂರ ರಾಣಿ ಚನ್ನಮ್ಮ ಪುತ್ಥಳಿಗೆ ಶಾಸಕ ಸಿ.ಸಿ. ಪಾಟೀಲ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ರಾಚೋಟೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಭ ಮೆರವಣಿಗೆ ಹಮ್ಮಿಕೊಳ್ಳಲಾಯಿತು.

Advertisement

ಗಾಂಧಿ ಸರ್ಕಲ್‌ ಹತ್ತಿರ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ  ಮಾಡಿ, ಮೆರವಣಿಗೆಗೆ ಚಾಲನೆ ನೀಡಲಾಯಿತು. ಕುಂಭಮೇಳ ಮೆರವಣಿಗೆ ಚನ್ನಮ್ಮ ಸರ್ಕಲ್‌ನಲ್ಲಿ ಸಂಪನ್ನಗೊಂಡಿತು. ಮೆರವಣಿಗೆ ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.

ನಂತರ ಕಿತ್ತೂರು ಚನ್ನಮ್ಮಾಜೀಯ ಬಲಗೈ ಬಂಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಿಂದ ಅದ್ಧೂರಿ ಡಿಜೆ ಕಾರ್ಯಕ್ರಮ ಹಾಗೂ ಭಾವಚಿತ್ರ ಮೆರವಣಿಗೆ ಆಯೋಜಿಸಲಾಗಿತ್ತು. ಮಹಾತ್ಮ ಗಾಂಧಿ ಸರ್ಕಲ್‌, ಮಹೇಂದ್ರಕರ ಸರ್ಕಲ್‌, ಟಾಂಗಾಕೂಟ, ಬಸವೇಶ್ವರ ಸರ್ಕಲ್‌, ಪಂಚರಹೊಂಡ, ಬನ್ನಿಕಟ್ಟಿ ಮಾರ್ಗವಾಗಿ ಕಿತ್ತೂರು ರಾಣಿ ಚನ್ನಮ್ಮಾಜಿ ಭಾವಚಿತ್ರದ ಮೆರವಣಿಗೆ ಚನ್ನಮ್ಮ ಸರ್ಕಲ್‌ನಲ್ಲಿ ಸಂಪನ್ನಗೊಂಡಿತು.

ರಕ್ತದಾನ ಶಿಬಿರ: ಹಳೆ ಜಿಲ್ಲಾಧಿಕಾರಿ ಕಚೇರಿ ಸರ್ಕಲ್‌ ಹತ್ತಿರದ ಬಸವೇಶ್ವರ ರಕ್ತ ಭಂಡಾರದಲ್ಲಿ ಲಿಂಗಾಯತ ಪಂಚಮಸಾಲಿ ಜಿಲ್ಲಾ ಯುವ ಘಟಕದ ವತಿಯಿಂದ ರಕ್ತದಾನ ಶಿಬಿರ ಜರುಗಿತು. ಶಾಸಕ ಸಿ.ಸಿ. ಪಾಟೀಲ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಇದೇ ವೇಳೆ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ, ಉಪಾಧ್ಯಕ್ಷ ಬಸವರಾಜ ಗಡ್ಡೆಪ್ಪನವರ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಯುವಕರಿಂದ ರಕ್ತದಾನ ಮಾಡಲಾಯಿತು.

ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡ ವಿಜಯಕುಮಾರ ಗಡ್ಡಿ, ಶಾಂತಣ್ಣ ಮುಳವಾಡ, ಬಸವರಾಜ ಗಡ್ಡೆಪ್ಪನವರ, ಶಶಿಧರ್‌ ದಿಂಡೂರ, ನಗರಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ, ನಗರಸಭೆ ಸದಸ್ಯೆ ವಿಜಯಲಕ್ಷ್ಮೀ ದಿಂಡೂರ, ವಿಜಯಲಕ್ಷ್ಮೀ ಮಾನ್ವಿ, ಸ್ವಾತಿ ಅಕ್ಕಿ, ಶರಣಪ್ಪ ಗೋಳಗೊಳಕಿ ಸೇರಿದಂತೆ ಅನೇಕರು ಇದ್ದರು.

ಬೆಳವಣಕಿ: ರೋಣ ತಾಲೂಕಿನ ಬೆಳವಣಕಿ ಗ್ರಾಮದ ವೀರರಾಣಿ ಕಿತ್ತೂರು ಚನ್ನಮ್ಮ ಸರ್ಕಲ್‌ನಲ್ಲಿ ವೀರರಾಣಿ
ಕಿತ್ತೂರು ಚನ್ನಮ್ಮ ವಿಜಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು. ರಾಜು ಹಿರೇಮಠ, ಅಂದಪ್ಪ ಹೊಸಂಗಡಿ, ಮುದಕಣ್ಣ ಹೊಸಂಗಡಿ, ವೀರನಗೌಡ ಪಾಟೀಲ, ತಿಪ್ಪಣ್ಣ ತೂಗುಣಸಿ, ಮುತ್ತಪ್ಪ ಕುಸುಗಲ್ಲ, ಶೇಖಪ್ಪ ಬಿಳೆಯಲಿ, ಮುದುಕಪ್ಪ ತೂಗುಣಸಿ, ಈಶಪ್ಪ ಹೊಸಂಗಡಿ, ಅಜ್ಜಪ್ಪ ಹೊಸಂಗಡಿ, ಸಂಗಮೇಶ ಗುದ್ಲಿ, ಮಲ್ಲಿಕಾರ್ಜುನ ಪಾಟೀಲ, ಬಸನಗೌಡ ಪಾಟೀಲ, ಸುಭಾಷ ಹೊಸಂಗಡಿ, ಅಮರೇಶ ಹದ್ಲಿ, ಮಲ್ಲಪ್ಪ ಹೊಸಂಗಡಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next