ಗದಗ: ಅವಳಿ ನಗರ ಸೇರಿ ಜಿಲ್ಲಾದ್ಯಂತ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗದಗ ಜಿಲ್ಲಾ ಪಂಚಮಸಾಲಿ ಸಮಾಜ, ಪಂಚಮಸಾಲಿ ಯುವ ಘಟಕದ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮ ಅವರ 200ನೇ ವಿಜಯೋತ್ಸವ ಹಾಗೂ 246ನೇ ಜಯಂತ್ಯುತ್ಸವ ಆಚರಿಸಲಾಯಿತು.
Advertisement
ನಗರದ ಜಿಲ್ಲಾಡಳಿತ ಭವನದ ಸಮ್ಮೇಳನ ಸಭಾಂಗಣದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಿಸಲಾಯಿತು. ನರಗುಂದ ಶಾಸಕ ಸಿ.ಸಿ. ಪಾಟೀಲ ಅವರು ವೀರರಾಣಿ ಕಿತ್ತೂರು ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿಗೌರವ ಸಮರ್ಪಿಸಿದರು.
Related Articles
Advertisement
ಗಾಂಧಿ ಸರ್ಕಲ್ ಹತ್ತಿರ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ, ಮೆರವಣಿಗೆಗೆ ಚಾಲನೆ ನೀಡಲಾಯಿತು. ಕುಂಭಮೇಳ ಮೆರವಣಿಗೆ ಚನ್ನಮ್ಮ ಸರ್ಕಲ್‌ನಲ್ಲಿ ಸಂಪನ್ನಗೊಂಡಿತು. ಮೆರವಣಿಗೆ ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.
ನಂತರ ಕಿತ್ತೂರು ಚನ್ನಮ್ಮಾಜೀಯ ಬಲಗೈ ಬಂಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಿಂದ ಅದ್ಧೂರಿ ಡಿಜೆ ಕಾರ್ಯಕ್ರಮ ಹಾಗೂ ಭಾವಚಿತ್ರ ಮೆರವಣಿಗೆ ಆಯೋಜಿಸಲಾಗಿತ್ತು. ಮಹಾತ್ಮ ಗಾಂಧಿ ಸರ್ಕಲ್, ಮಹೇಂದ್ರಕರ ಸರ್ಕಲ್, ಟಾಂಗಾಕೂಟ, ಬಸವೇಶ್ವರ ಸರ್ಕಲ್, ಪಂಚರಹೊಂಡ, ಬನ್ನಿಕಟ್ಟಿ ಮಾರ್ಗವಾಗಿ ಕಿತ್ತೂರು ರಾಣಿ ಚನ್ನಮ್ಮಾಜಿ ಭಾವಚಿತ್ರದ ಮೆರವಣಿಗೆ ಚನ್ನಮ್ಮ ಸರ್ಕಲ್‌ನಲ್ಲಿ ಸಂಪನ್ನಗೊಂಡಿತು.
ರಕ್ತದಾನ ಶಿಬಿರ: ಹಳೆ ಜಿಲ್ಲಾಧಿಕಾರಿ ಕಚೇರಿ ಸರ್ಕಲ್ ಹತ್ತಿರದ ಬಸವೇಶ್ವರ ರಕ್ತ ಭಂಡಾರದಲ್ಲಿ ಲಿಂಗಾಯತ ಪಂಚಮಸಾಲಿ ಜಿಲ್ಲಾ ಯುವ ಘಟಕದ ವತಿಯಿಂದ ರಕ್ತದಾನ ಶಿಬಿರ ಜರುಗಿತು. ಶಾಸಕ ಸಿ.ಸಿ. ಪಾಟೀಲ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಇದೇ ವೇಳೆ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ, ಉಪಾಧ್ಯಕ್ಷ ಬಸವರಾಜ ಗಡ್ಡೆಪ್ಪನವರ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಯುವಕರಿಂದ ರಕ್ತದಾನ ಮಾಡಲಾಯಿತು.
ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡ ವಿಜಯಕುಮಾರ ಗಡ್ಡಿ, ಶಾಂತಣ್ಣ ಮುಳವಾಡ, ಬಸವರಾಜ ಗಡ್ಡೆಪ್ಪನವರ, ಶಶಿಧರ್ ದಿಂಡೂರ, ನಗರಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ, ನಗರಸಭೆ ಸದಸ್ಯೆ ವಿಜಯಲಕ್ಷ್ಮೀ ದಿಂಡೂರ, ವಿಜಯಲಕ್ಷ್ಮೀ ಮಾನ್ವಿ, ಸ್ವಾತಿ ಅಕ್ಕಿ, ಶರಣಪ್ಪ ಗೋಳಗೊಳಕಿ ಸೇರಿದಂತೆ ಅನೇಕರು ಇದ್ದರು.
ಬೆಳವಣಕಿ: ರೋಣ ತಾಲೂಕಿನ ಬೆಳವಣಕಿ ಗ್ರಾಮದ ವೀರರಾಣಿ ಕಿತ್ತೂರು ಚನ್ನಮ್ಮ ಸರ್ಕಲ್‌ನಲ್ಲಿ ವೀರರಾಣಿಕಿತ್ತೂರು ಚನ್ನಮ್ಮ ವಿಜಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು. ರಾಜು ಹಿರೇಮಠ, ಅಂದಪ್ಪ ಹೊಸಂಗಡಿ, ಮುದಕಣ್ಣ ಹೊಸಂಗಡಿ, ವೀರನಗೌಡ ಪಾಟೀಲ, ತಿಪ್ಪಣ್ಣ ತೂಗುಣಸಿ, ಮುತ್ತಪ್ಪ ಕುಸುಗಲ್ಲ, ಶೇಖಪ್ಪ ಬಿಳೆಯಲಿ, ಮುದುಕಪ್ಪ ತೂಗುಣಸಿ, ಈಶಪ್ಪ ಹೊಸಂಗಡಿ, ಅಜ್ಜಪ್ಪ ಹೊಸಂಗಡಿ, ಸಂಗಮೇಶ ಗುದ್ಲಿ, ಮಲ್ಲಿಕಾರ್ಜುನ ಪಾಟೀಲ, ಬಸನಗೌಡ ಪಾಟೀಲ, ಸುಭಾಷ ಹೊಸಂಗಡಿ, ಅಮರೇಶ ಹದ್ಲಿ, ಮಲ್ಲಪ್ಪ ಹೊಸಂಗಡಿ ಭಾಗವಹಿಸಿದ್ದರು.