Advertisement

Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

03:07 PM Jan 10, 2025 | Team Udayavani |

ಗದಗ: ಜಿಲ್ಲೆಯ ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ (ಜ.10) ನಡೆದಿದೆ.

Advertisement

ಸುನೀಲ್ ಚವ್ಹಾಣ (25) ಆತ್ಮಹತ್ಯೆ ಮಾಡಿಕೊಂಡ ಮೃತ ಚಾಲಕ. ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ ಕಾಲೋನಿಯಲ್ಲಿರುವ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದ, (ಅತಿಥಿಗಳಿಗೆಂದು ಮೀಸಲಿಟ್ಟಿದ್ದ ಮನೆ) ಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಮನೆ ಕಟ್ಟುವ ವಿಷಯದಲ್ಲಿ ಸಹೋದರರ ನಡುವೆ ಕಲಹ ಏರ್ಪಟ್ಟಿತ್ತು. ಹೀಗಾಗಿ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಶಾಸಕರ ಹತ್ತಿರದ ಸಂಬಂಧಿಯೂ‌ ಆಗಿರುವ ಸುನೀಲ್, ಕಳೆದ ಮೂರು ವರ್ಷಗಳಿಂದ ಶಾಸಕರಿಗೆ ಚಾಲಕನಾಗಿ ಕೆಲಸ‌ ಮಾಡುತ್ತಿದ್ದನು.

ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ,‌ ಪರಿಶೀಲನೆ ನಡೆಸಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next