Advertisement

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

04:01 PM Apr 20, 2024 | Team Udayavani |

ಗದಗ : ಒಂದೇ ಕುಟುಂಬದ ನಾಲ್ವರ ಹತ್ಯೆಯನ್ನು ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ ವ್ಯಕ್ತವಾಗಿದೆ. ಐವರು ಅನುಮಾನಾಸ್ಪದ ವ್ಯಕ್ತಿಗಳ ದೃಶ್ಯ ನಗರದ ಚನ್ನಮ್ಮ ಸರ್ಕಲ್ ಬಳಿಯ ಅಂಗಡಿಯಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisement

ಸಿಸಿ ಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಧ್ಯ ರಾತ್ರಿ 2.55 ರ ಸುಮಾರಿಗೆ ದೃಶ್ಯ ಸೆರೆಯಾಗಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಜಾಲ ಹಿಡಿದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆದರೆ ಸಿಸಿಟಿವಿ ದೃಶ್ಯ ಇದೇ ಪ್ರಕರಣಕ್ಕೆ‌ಬಂಧಿಸಿದ್ದು‌ ಹೌದೋ ಅಲ್ಲವೋ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ.

ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ನಗರದ ದಾಸರ ಓಣಿಯಲ್ಲಿ ಏಪ್ರಿಲ್ 18 ರಂದು ರಾತ್ರಿ ನಡೆದಿತ್ತು. ನಗರಸಭೆ ಉಪಾಧ್ಯಕ್ಷೆ ಪುತ್ರ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು.

ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆಯಾಗಿದ್ದು, ಈ ಮೂವರು ಕೊಪ್ಪಳ ಮೂಲದವರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next