Advertisement

ಗದುಗಿನ ತೋಂಟದಾರ್ಯ ಮಠದ ಡಾ.ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ್ಯ 

12:25 PM Oct 20, 2018 | |

ಗದಗ : ತೊಂಟದಾರ್ಯ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ಅವರು ಶನಿವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. 

Advertisement

ರಾತ್ರಿ ಮಲಗಿದ್ದ ಶ್ರೀಗಳು ಮಲಗಿದ್ದಲ್ಲೇ ಎದೆ ನೋವು ಕಾಣಿಸಿಕೊಂಡಿದ್ದು ಬಳಿಕ ಅವರನ್ನು ಗದಗಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಮಾಜಿಕ ಕಳಕಳಿಯ ನೂರಾರು ಕಾರ್ಯಗಳ ಮೂಲಕ ಸ್ವಾಮೀಜಿ ಜನಾನುರಾಗಿಯಾಗಿದ್ದರು. 

ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸ್ವಾಮೀಜಿ ಲಿಂಗೈಕ್ಯರಾದ ವಿಚಾರ ತಿಳಿದು ಸಾವಿರಾರು ಮಂದಿ ಭಕ್ತರು ಮಠಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

Advertisement

ನಾಳೆ ಸಂಜೆ 4 ಗಂಟೆಗೆ ಮಠದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next