ಗದಗ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ತಾಲೂಕಿನ ಲಕ್ಕುಂಡಿ ಕ್ರಾಸ್‌ನ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಗುರುವಾರ ನಡೆದಿದೆ.
ಗದಗ ನಗರದಿಂದ ಕೊಪ್ಪಳ ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಹೊಸಪೇಟೆಯಿಂದ ಗದಗ ಮಾರ್ಗವಾಗಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:INDvsAUS; ರೋಹಿತ್-ರಾಹುಲ್ ಅಲ್ಲ; ಸರಣಿ ವಿಜೇತ ಟ್ರೋಫಿ ಎತ್ತಿ ಹಿಡಿದ ಆಟಗಾರರು ಯಾರು?
ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದು, ಮೃತರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.