Advertisement

ಗದಗ: ಭೀಷ್ಮ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

12:12 PM Dec 02, 2019 | Team Udayavani |

ಗದಗ: ನಗರದ ಐತಿಹಾಸಿಕ ಭೀಷ್ಮ ಕೆರೆಯಲ್ಲಿ ಸೋಮವಾರ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

Advertisement


ಸೋಮವಾರ ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಕೆರೆಯಲ್ಲಿ ಮೃತ ದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯ ವರ್ತಕರು ಗದಗ ಶಹರ ಠಾಣೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿ ಪೊಲೀಸರು, ಬೋಟ್ ಮೂಲಕ ಶವವನ್ನು ಹೊರ ತೆಗೆದು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತಳಿಗೆ ಸುಮಾರು 30 ವರ್ಷ ವಯಸ್ಸಾಗಿರಬಹುದು. ಮೂರು ದಿನಗಳ ಹಿಂದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next