Advertisement

Gadag: ಗದಗ ನಗರಕ್ಕೆ ಆಗಮಿಸಿದ ವಿಜಯ ಜ್ಯೋತಿ ಸ್ವಾಗತಿಸಿದ ಸಚಿವ ಎಚ್. ಕೆ. ಪಾಟೀಲ

03:53 PM Oct 12, 2024 | Team Udayavani |

ಗದಗ: ಕಿತ್ತೂರು ಉತ್ಸವದ ಪ್ರಯುಕ್ತ ರಾಜ್ಯಾದ್ಯಂತ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಶನಿವಾರ (ಅ.12) ಗದಗ ನಗರಕ್ಕೆ ಆಗಮಿಸಿತು.

Advertisement

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ವಿಜಯ ಜ್ಯೋತಿಗೆ ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಅವರು ಸ್ವಾಗತಿಸಿ, ಪೂಜೆ ಸಲ್ಲಿಸಿದರು.

ಕಿತ್ತೂರ ಚನ್ನಮ್ಮ ವಿಜಯ ಜ್ಯೋತಿಗೆ ಸಚಿವರು ಸ್ವಾಗತಿಸಿ, ರಥದಲ್ಲಿದ್ದ ರಾಣಿ ಚೆನ್ನಮ್ಮ ಪುತ್ಥಳಿಗೆ ಪುಷ್ಪಹಾರ ಅರ್ಪಿಸಿ, ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ನಗರದ ಪ್ರವಾಸಿ ಮಂದಿರದಿಂದ ವೀರಜ್ಯೋತಿ ಮೆರವಣಿಗೆಯು ಆರಂಭವಾಗಿ ಮುಳಗುಂದ ನಾಕಾ, ಎಸಿ ಕಚೇರಿ ಮೂಲಕ ಕಲಾ ತಂಡಗಳೊಂದಿಗೆ ಸಾಗಿದ ವಿಜಯ ಜ್ಯೋತಿ ಯಾತ್ರೆ ಕಿತ್ತೂರ ಚನ್ನಮ್ಮ‌ ವೃತ್ತ ತಲುಪಿತು.

Advertisement

ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅ. 23ರಿಂದ 25ರ ವರೆಗೆ ನಡೆಯಲಿರುವ ಕಿತ್ತೂರು ಉತ್ಸವ ಪ್ರಯುಕ್ತ ರಾಜ್ಯದಾದ್ಯಂತ ಸಂಚರಿಸುವ ಈ ವಿಜಯ ಜ್ಯೋತಿ ಯಾತ್ರೆ ಹಾವೇರಿ ಜಿಲ್ಲೆಯಿಂದ ಗದಗ ಜಿಲ್ಲೆಗೆ ಆಗಮಿಸಿ ಲಕ್ಕುಂಡಿ, ಬನ್ನಿಕೊಪ್ಪ ಮಾರ್ಗವಾಗಿ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಗೆ ಬಿಳ್ಕೊಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮೀತಿ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಸಿದ್ದಪ್ಪ ಪಲ್ಲೇದ, ಎಂ.ಎಸ್. ಕರಿಗೌಡರ್, ಶರಣು ಪಾಟೀಲ, ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ, ತಹಶಿಲ್ದಾರ ಶ್ರೀನಿವಾಸಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next