ಗದಗ: ಕಳೆದ 20 ದಿನಗಳಿಂದ ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ನಗರದ 35 ವಾರ್ಡ್ಗಳ ಬಹುತೇಕ ಪ್ರದೇಶಗಳಲ್ಲಿ 15ರಿಂದ 25 ದಿನಗಳಿಗೊಮ್ಮೆ ನೀರು ಪೂರೈಕೆ ಆಗುತ್ತಿರುವುದರಿಂದ ಮಹಿಳೆಯರು, ವೃದ್ಧರು, ಮಕ್ಕಳು ಜೀವಜಲಕ್ಕಾಗಿ ಪರದಾಡುವಂತಾಗಿದೆ.ತುಂಗಭದ್ರಾ ನದಿಪಾತ್ರದಲ್ಲಿ ನೀರಿದ್ದರೂ ಜಿಲ್ಲೆಯಲ್ಲಿ ಜೀವಜಲಕ್ಕೆ ಹಾಹಾಕಾರ ಎದುರಾಗಿದೆ.
Advertisement
ಪದೇ ಪದೆ ಮುಖ್ಯ ಕೊಳವೆ ಪೈಪ್ಗ್ಳಲ್ಲಿ ನೀರು ಸೋರಿಕೆಯಾಗಿತ್ತಿದ್ದು, ನೀರು ಪೂರೈಕೆ ಕಳೆದ 20 ದಿನಗಳಿಂದ ಸ್ಥಗಿತಗೊಂಡಿದೆ. ಪರಿಣಾಮ ಹೊಸ ವರ್ಷದ ಆರಂಭದಲ್ಲೇ ಅವಳಿ ನಗರದ ಜನತೆ ವಾಟರ್ ಶಾಕ್ ಅನುಭವಿಸುವಂತಾಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ನಿಂದ ಪೈಪ್ಲೈನ್ ಮೂಲಕ ಅವಳಿ ನಗರಕ್ಕೆ ತುಂಗಭದ್ರಾ ನದಿ ನೀರನ್ನು ಪೂರೈಸಲಾಗುತ್ತದೆ. ಮುಖ್ಯ ಕೊಳವೆ ಪೈಪ್ಲೈನ್ಗಳಲ್ಲಿ ನೀರು ಸೋರಿಕೆಯಾಗುತ್ತಿರುವುದರಿಂದ ಕಳೆದ ನಾಲ್ಕು ದಶಕಗಳಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತಿಲ್ಲ.
Related Articles
Advertisement
ಅವಳಿ ನಗರದಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಹದಗೆಟ್ಟಿದೆ. ಕುಡಿಯುವ ನೀರಿನ ತೊಂದರೆಯಾದರೆ ತಕ್ಷಣ ಸಂಬಂಧಿಸಿದ ವಾರ್ಡ್ಗಳಿಗೆ ನೀರು ಪೂರೈಸಲು 5 ಟ್ಯಾಂಕರ್ಗಳನ್ನು ಬಾಡಿಗೆ ರೂಪದಲ್ಲಿ ಪಡೆದುಕೊಳ್ಳಲು ಕ್ರಮ ಜರುಗಿಸಬೇಕು.ಬಿ.ಬಿ. ಅಸೂಟಿ, ಶಹರ ಕಾಂಗ್ರೆಸ್
ಸಮಿತಿ ಅಧ್ಯಕ್ಷ 35 ವಾರ್ಡ್ಗಳಲ್ಲಿ ಬೋರ್ವೆಲ್ ಪೈಪ್ ಹಾಗೂ 24/7 ಪೈಪ್ಲೈನ್ ಹೊಸದಾಗಿ ಹಾಕುವುದು ಮತ್ತು ರಿಪೇರಿ ಮಾಡಲು ಹಾಗೂ ಪ್ರತಿಯೊಂದು ವಾರ್ಡ್ಗೆ ನಿಗದಿಯಾಗಿರುವ 5 ಲಕ್ಷ ರೂ. ಮೊತ್ತದ ಟೆಂಡರ್ ತೆರೆಯಲಾಗುವುದು. ಜತೆಗೆ ಕಾಲುವೆ ಮೂಲಕ ಡಂಬಳ ಕಿನಾಲ್ಗೆ ನೀರು ಹರಿಸಿ ಅವಳಿ ನಗರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಜರುಗಿಸಲಾಗುವುದು.
ಗೋವಿಂದರೆಡ್ಡಿ, ಜಿಲ್ಲಾಧಿಕಾರಿ ಅರುಣಕುಮಾರ ಹಿರೇಮಠ