ಡಾ| ಆನಂದ ಕೆ., ಸಹಾಯಕ ಆಯುಕ್ತ ರಾಚಪ್ಪ ಹುಣಸಗಿ ಹಾಗೂ ಹಿರಿಯ ವೈದ್ಯಾಧಿಕಾರಿಗಳು ರಂಗನವಾಡಕ್ಕೆ ಭೇಟಿ ನೀಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು.
Advertisement
ದಿಗ್ಬಂಧನ: ಜಿಲ್ಲಾಡಳಿತ ಭೇಟಿ ನೀಡಿದ ಕೆಲವೇ ಸಮಯದಲ್ಲಿ ರಂಗನವಾಡ ಪ್ರವೇಶಿಸುವ ಎಲ್ಲ ಮಾರ್ಗಗಳಿಗೆ ಬ್ಯಾರಿಕೇಡ್ ಹಾಕಲಾಯಿತು. ಬಡಾವಣೆಗೆ ಪ್ರವೇಶ ಕಲ್ಪಿಸುವ ಎಲ್ಲ ಮಾರ್ಗಗಳಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿ, ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಯಿತು. ಸಮೀಕ್ಷೆ: ಆರೋಗ್ಯ ಇಲಾಖೆ ಅಧಿ ಕಾರಿಗಳು, ಆಶಾ ಕಾರ್ಯಕರ್ತೆಯರು ಸಮೀಕ್ಷೆ ನಡೆಸಿದರು. ನಗರಸಭೆ ಅಧಿ ಕಾರಿಗಳು ಹಾಗೂ ಸಿಬ್ಬಂದಿ, ಬಡಾವಣೆಯ ಎಲ್ಲ ರಸ್ತೆಗಳಲ್ಲಿಬ್ಲೀಚಿಂಗ್ ಪೌಡರ್, ನೀರು ಸಿಂಪಡಣೆ ಮಾಡಿದರು. ಇದು ಸಾರ್ವಜನಿಕರ ಅನುಮಾನಕ್ಕೆ ಪುಷ್ಠಿ ನೀಡಿತು. ಅಧಿಕೃತ ಮೂಲಗಳ ಪ್ರಕಾರ
ಅನಾರೋಗ್ಯಕ್ಕೀಡಾದ ಬಡಾವಣೆಯ ವೃದ್ಧೆಯನ್ನು ಏ. 4ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧೆಗೆ ಕೊರೊನಾ ಸೋಂಕಿನ ಲಕ್ಷಣಗಳಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದರಿಂದ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಮಧ್ಯೆ ಅಧಿಕಾರಿಗಳು ಬಡಾವಣೆಗೆ ಭೇಟಿ ನೀಡಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರಿಂದ ಸಹಜವಾಗಿಯೇ ಸ್ಥಳೀಯರಲ್ಲಿ ಆತಂಕ ಮುಡಿಸಿದೆ.