Advertisement
ತಾಲೂಕಿನ ಲಕ್ಕುಂಡಿ ಗ್ರಾಮದ 44 ವರ್ಷದ ವ್ಯಕ್ತಿ ಜ್ವರ, ಮಧುಮೇಹ ಹಾಗೂ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಜ್ವರ ಹೆಚ್ಚಾಗಿದ್ದರಿಂದ ಮೇ 27 ರಂದು ಬೆಟಗೇರಿಯ ಸಿಎಸ್‌ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಜ್ವರ ಉಪಶಮನವಾಗದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜೂ.1 ರಂದು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಈ ವೇಳೆ ಜ್ವರದ ಲಕ್ಷಣಗಳ ಬಗ್ಗೆ ಅನುಮಾನಗೊಂಡಿದ್ದ ಅಲ್ಲಿನ ವೈದ್ಯರು ರೋಗಿಯ ಗಂಟಲಿನ ದ್ರವ್ಯದ ಮಾದರಿಯನ್ನು ಸಂಗ್ರಹಿಸಿ, ಕೋವಿಡ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.
Advertisement
ಗದಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಎರಡನೇ ಬಲಿ
06:43 PM Jun 03, 2020 | sudhir |
Advertisement
Udayavani is now on Telegram. Click here to join our channel and stay updated with the latest news.