ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.
ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು.
ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆಯಾಗಿದ್ದು, ಈ ಮೂವರು ಕೊಪ್ಪಳ ಮೂಲದವರು ಎಂದು ತಿಳಿದು ಬಂದಿದೆ.
ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ ಸಂಬಂಧಿಗಳಿವರು ಎನ್ನಲಾಗಿದ್ದು, ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ದರು ಎಂದು ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.
ಸ್ಥಳಕ್ಕೆ ಎಸ್ಪಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದು, ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಸಲಾಗುತ್ತಿದೆ.