Advertisement

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

08:49 AM Apr 19, 2024 | Team Udayavani |

ಗದಗ: ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಎಸ್‌ಪಿ ಬಿ.‌ಎಸ್. ನೇಮಗೌಡ ಪ್ರತಿಕ್ರಿಯಿಸಿದ್ದು, ಮಧ್ಯರಾತ್ರಿ ನಾಲ್ಕು ಜನರಾದ ಪ್ರಕಾಶ ಬಾಕಳೆ ಮಗ ಕಾರ್ತಿಕ್, ಸಂಬಂಧಿಕರಾದ ಪರಶುರಾಮ್, ಲಕ್ಷ್ಮೀ, ಆಕಾಂಕ್ಷಾ ಹತ್ಯೆ ಆಗಿದೆ.

Advertisement

ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ 2 ರಿಂದ 3 ಗಂಟೆ ಆಗಿದೆ ಎನ್ನಲಾಗಿದ್ದು, ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವುದು ಕಂಡು ಬರುತ್ತಿದೆ. ಯಾರು ಎಂಬುದು ಗೊತ್ತಾಗಿಲ್ಲ. ಪರಿಶೀಲನೆ ಮುಂದುವರೆದಿದೆ ಎಂದು ತಿಳಿಸಿದರು.

ಮುಂದುವರೆದು ಮಾತನಾಡಿ, ಆದಷ್ಟು ಬೇಗ ದಸ್ತಗಿರಿ ಮಾಡುತ್ತೇವೆ. ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ ಬಾಗಿಲು ಬಡೆದರೂ ತೆಗೆದಿಲ್ಲ. ಆದರೆ ಹೊರಗಡೆ ಬಂದು ನೋಡಿದಾಗ 2 ರೂಮ್ ನಲ್ಲಿ ಹತ್ಯೆ ಆಗಿತ್ತು.ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಟೆರೇಸ್ ನಿಂದ ಬಂದಿದ್ದಾರೆ ಎನ್ನಲಾಗುತ್ತಿದ್ದು, ಪರಿಶೀಲನೆ ಮಾಡುತ್ತಿದ್ದೇವೆ ಎಂದರು.

ಘಟನಾ ಸ್ಥಳಕ್ಕೆ ಸಚಿವ ಎಚ್.ಕೆ ಪಾಟೀಲ ಭೇಟಿ

ಘಟನಾ ಸ್ಥಳಕ್ಕೆ ಗದಗ ಜಿಲ್ಲಾ ಉಸ್ತುವಾರಿ, ಕಾನೂನು, ನ್ಯಾಯ, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ಭೇಟಿ ನೀಡಿದ್ದಾರೆ.

Advertisement

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮನೆಗೆ ಭೇಟಿ ನೀಡಿದ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಸಚಿವರ ಮುಂದೆ ಅಳಲು ತೋಡಿಕೊಂಡ ಕುಟುಂಬಸ್ಥರು, ಆರೋಪಿಗಳನ್ನು ಬೇಗ ಪತ್ತೆ ಹಚ್ಚುವಂತೆ ಎಸ್.ಪಿ ಅವರಿಗೆ ಹೇಳಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

Advertisement

Udayavani is now on Telegram. Click here to join our channel and stay updated with the latest news.

Next