Advertisement

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

04:12 PM Dec 15, 2024 | Team Udayavani |

ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಜಿಲ್ಲೆಯ ರೋಣ ಪಟ್ಟಣದಲ್ಲಿ ಡಿ.15ರ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ವಿಚಾರದಲ್ಲಿ ಬಿ.ವೈ. ವಿಜಯೇಂದ್ರ 150 ಕೋಟಿ ರೂ. ಆಮಿಷದ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ,  ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು.

ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಮಾಧಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗಿದ್ರೆ ಸಿ.ಬಿ.ಐ. ತನಿಖೆಗೆ ಕೊಡ್ಲಿ ಎಂದರು.

ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ, ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೆ ತಾನೇ ಎಂದು ಸಿಎಂ ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next