ಗದಗ: ಕ್ರೀಡಾಪಟುಗಳು ಕ್ರೀಡೆಯಲ್ಲಿನ ಸೋಲನ್ನೇ ಗೆಲುವಿನ ಟ್ಟಿಲುಗಳನ್ನಾಗಿಸಿಕೊಂಡು ಕ್ರೀಡಾ ಸ್ಫೂರ್ತಿಯೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಹೇಳಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆ ಎಂಬುದು ಬರೀ ಕ್ರೀಡಾಕೂಟಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಯುವಜನತೆ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೊಂದಬೇಕು. ಜಿಲ್ಲೆಯಲ್ಲಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸಿದಂತಹ ಕ್ರೀಡಾಪಟುಗಳಿದ್ದಾರೆ. ಅವರಂತೆಯೇ ಜಿಲ್ಲೆಯ ಕ್ರೀಡಾಪಟುಗಳು ದಸರಾ ಕ್ರೀಡಾಕೂಟದಲ್ಲೂ ಸಹ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ತಾಲೂಕಾ ಕ್ರೀಡಾಧಿಕಾರಿ ಎಂ.ಎಸ್. ಕುಚಬಾಳ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಯೋಗ ನಿವೃತ್ತ ಶಿಕ್ಷಕ ಕೆ.ಎಸ್. ಪಲ್ಲೇದ, ಜಿಲ್ಲೆಯ ಏಳು ತಾಲೂಕುಗಳ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಕರು, ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಗೀತಾಂಜಲಿ ಗೌಡರ ಕಾರ್ಯಕ್ರಮ ನಿರೂಪಿಸಿ, ಮಹೇಶ ತಳಳ್ಳಿ ವಂದಿಸಿದರು.
ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಯುವಜನತೆ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೊಂದಬೇಕು. ಜಿಲ್ಲೆಯಲ್ಲಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸಿದಂತಹ ಕ್ರೀಡಾಪಟುಗಳಿದ್ದಾರೆ. ಅವರಂತೆಯೇ ಜಿಲ್ಲೆಯ ಕ್ರೀಡಾಪಟುಗಳು ದಸರಾ ಕ್ರೀಡಾಕೂಟದಲ್ಲೂ ಸಹ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಬೇಕು.
∙
ಉಷಾ ದಾಸರ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ