Advertisement
ನಗರದ ಪರಿಸರ ಲೇಔಟ್ ನಲ್ಲಿರುವ ಭಾರತ ರತ್ನ ಪಂಡಿತ ಭೀಮಸೇನ ಜೋಶಿ ರಂಗಮಂದಿರದಲ್ಲಿ ಉಚಿತ ಬೆಳಕು, ಸುಸ್ಥಿರ ಬದುಕು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
Related Articles
Advertisement
ಗದಗ ಜಿಲ್ಲೆಯಲ್ಲಿ ಇಲ್ಲಿಯವರೆಗೆ 88 ಲಕ್ಷ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಜೋಳದ ಜೊತೆಗೆ ಪ್ರತಿವ್ಯಕ್ತಿಗೆ 170 ರೂ. ನಂತೆ ಜಿಲ್ಲೆಯಲ್ಲಿ 10 ಕೋಟಿ ರೂ. ಹಣ ವಿತರಿಸಲಾಗಿದೆ. ಗೃಹಲಕ್ಣ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಶೇ. 90ರಷ್ಟು ನೋಂದಣಿಯಾಗಿದ್ದು, ಆ. 17ರಂದು ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಯುವನಿಧಿ ಕಾರ್ಯಕ್ರಮ ಡಿಸೆಂಬರ್ ತಿಂಗಳಲ್ಲಿ ಆರಂಭವಾಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ವಿವರಿಸಿದರು.
ಜಿಲ್ಲೆಯಲ್ಲಿ ಶೇ. 90ರಷ್ಟು, ಗದಗ ವಿಧಾನಸಭಾ ಕ್ಷೇತ್ರದ ಗದಗ-ಬೆಟಗೇರಿ ಶಹರದಲ್ಲಿ ಶೇ. 80, ಗ್ರಾಮೀಣ ಭಾಗದಲ್ಲಿ ಸೇ. 91ರಷ್ಟು ನೋಂದಣಿಯಾಗಿದ್ದು, ಇದೇ ತಿಂಗಳಿನಿಂದ ಗೃಹಜ್ಯೋತಿಯ ಲಾಭ ಪಡೆಯಲಿದ್ದಾರೆ. ಗೃಹಜ್ಯೋತಿ ಯೋಜನೆ ಗದಗ ಜಿಲ್ಲೆಯಲ್ಲಿ ವಿದ್ಯುಕ್ತವಾಗಿ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.
ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧೀಕ್ಷಕ ಇಂಜಿನಿಯರ್ ಎಸ್.ಎಸ್. ಜಂಗಿನ ಮಾತನಾಡಿ, ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯೊಳಗೆ ವಿಲೀನಗೊಳಿಸಿ ಮಾಸಿಕ 53 ಯುನಿಟ್ ವಿದ್ಯುತ್ ಹಾಗೂ ಅಮೃತ ಜ್ಯೋತಿ ಯೋಜನೆಯಡಿ 75 ಯುನಿಟ್ ಉಚಿತ ವಿದ್ಯುತ್ ನೀಡಲಗುತ್ತಿದೆ ಎಂದು ಹೇಳಿದರು.
ಹೆಸ್ಕಾಂ ಎಂಡಿ ಮೊಹಮ್ಮದ್ ರೋಷನ್, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರಭು ಬುರಬುರೆ, ನಗರಸಭೆ ಸದಸ್ಯ ಕೃಷ್ಣಾ ಪರಾಪೂರ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಸ್ಕಾಂ ಗದಗ ವಿಭಾಗದ ಮುಖ್ಯ ಇಂಜಿನಿಯರ್ ರಮೇಶ ಬೆಂಡಿಗೇರಿ ಸೇರಿ ಅನೇಕರು ಇದ್ದರು.