Advertisement

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

02:48 PM Dec 15, 2024 | Team Udayavani |

ಗದಗ: ಜಿಲ್ಲೆಯ ಪಂಚಮಸಾಲಿ ಮೀಸಲಾತಿ ಹೋರಾಟಗಾರರನ್ನು ಬಂಧಿಸಿದ ಘಟನೆ ಗದಗ ಹೊರವಲಯ, ರೋಣ ಹಾಗೂ ನರೇಗಲ್ ಬಳಿ ಡಿ.15ರ ರವಿವಾರ ನಡೆದಿದೆ.

Advertisement

ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ, ಆನಂದ್ ಕರಿಬಿಷ್ಠಿ ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ.

ಸಿಎಂ ಕಾರ್ಯಕ್ರಮಕ್ಕೆ ಕಪ್ಪುಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದ (ಮುಖಂಡರು) ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಆಯೋಜನೆಗೊಂಡಿರುವ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಸಂದರ್ಭ ಈ ಘಟನೆ ನಡೆದಿದೆ.

2ಎ ಮೀಸಲಾತಿ ಹೋರಾಟದ ವೇಳೆ ಲಾಠಿ ಚಾರ್ಜ್ ಖಂಡಿಸಿ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಯತ್ನಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next