ಆದೇಶದನ್ವಯ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಒಟ್ಟು 16 ಬೆಂಚ್‌ಗಳನ್ನು ರಚಿಸುವ ಮೂಲಕ 2,067 ಚಾಲ್ತಿ ಪ್ರಕರಣಗಳು ಹಾಗೂ 4,710 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 6777 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಹೇಳಿದರು.
Advertisement
ನಗರದ ಜಿಲ್ಲಾ ನ್ಯಾಯಾಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳಲ್ಲಿ 10 ಮೋಟಾರು ವಾಹನ ಅಪಘಾತ ಪ್ರಕರಣಗಳು, 118 ಚೆಕ್ ಬೌನ್ಸ್ ಪ್ರಕರಣಗಳು, 33 ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, 364 ಅಸಲುದಾವೆ ಪ್ರಕರಣಗಳು, 116 ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು, 38 ವೈವಾಹಿಕ ಪ್ರಕರಣಗಳು, 13 ವಿದ್ಯುಚ್ಚಕ್ತಿ ಪ್ರಕರಣಗಳು ಸೇರಿದಂತೆ ಒಟ್ಟು 2,067 ಚಾಲ್ತಿ ಪ್ರಕರಣಗಳನ್ನು 13,99,66,852 ರೂ. ಗಳ ಪರಿಹಾರ ಒದಗಿಸುವುದರ ಮೂಲಕ ರಾಜೀ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಅದಾಲತ್ ಪ್ರಕರಣಗಳು ಸೇರಿದಂತೆ ಒಟ್ಟು 4,710 ವ್ಯಾಜ್ಯಪೂರ್ವ ಪ್ರಕರಣಗಳನ್ನು 6,07,88,407 ರೂ.ಗಳಿಗೆ ರಾಜೀ ಸಂಧಾನ
ಮಾಡಲಾಗಿದೆ. ವಿಶೇಷವಾಗಿ ಗದುಗಿನ ಪ್ರಧಾನ ಕೌಟುಂಬಿಕ ನ್ಯಾಯಾಲಯದಲ್ಲಿ ಹಾಗೂ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ
8 ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಹಾರ ಬದಲಾಯಿಸಿ ಅವರಿಗೆ ಸಿಹಿ ಹಂಚಿ ಕಳುಹಿಸಿಕೊಡಲಾಯಿತು.
Related Articles
Advertisement
ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಖಾದರಸಾಬ್ ಬೆನಕಟ್ಟಿ, ಪ್ರಧಾನ ಹಿರಿಯ ನ್ಯಾಯಾಧೀಶೆ ಸಿಜೆಎಂ ಪ್ರೀತಿ ಸದ್ಗುರು ಸದ್ಯ ಜೋಶಿ, ಅಪರ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ಕುರುಬೆಟ್, ಪ್ರಧಾನ ದಿವಾಣಿ ನ್ಯಾಯಾಧೀಶ ಅರುಣ ಚೌಗಲೆ, ಜೆಎಂಎಫ್‌ಸಿ 1ನೇ ನ್ಯಾಯಾಲಯದ ನ್ಯಾಯಾಧೀಶೆ ಪುಷ್ಪಾ ಜೋಗೋಜಿ, ಜೆಎಂಎಫ್‌ಸಿ 2ನೇ ನ್ಯಾಯಾಲಯದನ್ಯಾಯಾಧೀಶ ಬೀರಪ್ಪ ಕಾಂಬಳೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿಪಾಟೀಲ, ಉಪಾಧ್ಯಕ್ಷ ಎ.ಎಂ.
ಹದ್ಲಿ, ಪ್ರಧಾನ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ, ಜಂಟಿ ಕಾರ್ಯದರ್ಶಿ ಪಿ.ಬಿ. ಕಣಗಿನಹಾಳ, ಖಜಾಂಚಿ ವಿ.ಎಚ್.
ಮೇರವಾಡೆ, ಸರ್ಕಾರಿ ಅಭಿಯೋಜಕಿ ಸವಿತಾ ಶಿಗ್ಲಿ, ಜಿಲ್ಲಾ ಸರ್ಕಾರಿ ವಕೀಲರಾದ ಬಿ.ಟಿ. ಪಾಟೀಲ, ಅಪರ ಜಿಲ್ಲಾ ಸರ್ಕಾರಿ ವಕೀಲ ಕೆ.ಎಸ್. ಹೂಲಿ ಇದ್ದರು.