Advertisement

Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ

02:11 PM Dec 04, 2024 | Team Udayavani |

ಗದಗ: ನಗರದ ತೋಂಟದಾರ್ಯ ಮಠದ ಆವರಣದಲ್ಲಿನ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಶಿವಾನುಭವ ಮಂಟಪದಲ್ಲಿ ಎಡೆಯೂರು ಶ್ರೀ ತೋಂಟದಾರ್ಯ ಸಂಸ್ಥಾನ ಮಢ ಹಾಗೂ ಡಾ. ಎಂ.ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆಯಿಂದ ಪ್ರಕಟಣೆಗೊಂಡ ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥವನ್ನು ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೆ ಪಿ. ಕೃಷ್ಣ ಅವರು ಡಿ.4ರ ಬುಧವಾರ ಬಿಡುಗಡೆಗೊಳಿಸಿದರು.

Advertisement

ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಗದಗ ಜಿಲ್ಲೆಗೆ ತನ್ನದೇ ಆದ ಸಂಸ್ಕೃತಿ, ಕಲೆ ಸೇರಿ ವೈವಿಧ್ಯತೆಯಿದೆ. ಅಂತಹ ಗದಗಿನ ಮಣ್ಣಿನ ಸತ್ಸಂಪ್ರದಾಯದ ಪ್ರತಿರೂಪವೇ ಡಿ.ಆರ್. ಪಾಟೀಲ. ವಿದ್ಯೆ, ಇತಿಹಾಸ, ಸಂಸ್ಕೃತಿ, ಸಾಹಿತ್ಯ, ಧರ್ಮಸಂಸ್ಕೃತಿ ಅವರಲ್ಲಿ ಅಡಕವಾಗಿದೆ ಎಂದರು.

ಹಿಂದೆ ರಾಜಕಾರಣ ಎಂದರೆ ಸೇವಾ ಮನೋಭಾವನೆಯಾಗಿತ್ತು. ಇಂದು ರಾಜಕಾರಣ, ಸೇವಾಕಾರಣ ಹೋಗಿ ಸ್ವಕಾರಾಣವಾಗಿದೆ. ಸೇವಾಕಾರಣದ ಕೊನೆಯ ಕೊಂಡಿಯಾಗಿ ನಮ್ಮ ಮುಂದೆ ಡಿ.ಆರ್. ಪಾಟೀಲ ಅವರಿದ್ದಾರೆ ಎಂದರು.

ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿದರು.

ಡಾ. ತೋಂಟದ ಸಿದ್ಧರಾಮ ಶ್ರೀಗಳು, ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

Advertisement

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಜಿ.ಎಸ್. ಪಾಟೀಲ, ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಮುಖಂಡರಾದ ಗುರಣ್ಣ ಬಳಗಾನೂರ, ಬಿ.ಬಿ.ಅಸೂಟಿ, ಅಶೋಕ ಮಂದಾಲಿ, ರವಿ ಮೂಲಿಮನಿ, ಉಮೇಶಗೌಡ ಪಾಟೀಲ ಸೇರಿ ಹಲವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next