Advertisement

Gagana Kunchi..: ಸಿನಿಮಾದತ್ತ ಗಟ್ಟಿಮೇಳದ ಆರತಿ

01:29 PM Oct 03, 2023 | Team Udayavani |

“ಕಾಲಚಕ್ರ’ ಧಾರಾವಾಹಿಯಲ್ಲಿ ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟು, ಬಳಿಕ ಕನ್ನಡ ಕಿರುತೆರೆಯಲ್ಲಿ “ದೊಡ್ಮನೆ ಸೊಸೆ’, “ಮಹಾದೇವಿ’, “ಗಟ್ಟಿಮೇಳ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಗಗನ ಕುಂಚಿ, ಈಗ ಹಿರಿತೆರೆಗೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ.

Advertisement

ಸದ್ಯ ನಟಿ ಗಗನ ಕುಂಚಿ ಏಕಕಾಲಕ್ಕೆ “ಸುಗಮ ಫಿಲಂಸ್‌’ ಬ್ಯಾನರ್‌ ನಲ್ಲಿ ನಿರ್ಮಾಣವಾಗುತ್ತಿರುವ ಎರಡು ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಮೊದಲ ಸಿನಿಮಾವನ್ನು ತೆಲುಗಿನ ಗುರುಕುಮಾರ್‌ ಪಿ. ನಿರ್ದೇಶಿಸುತ್ತಿದ್ದಾರೆ. ಎರಡನೇ ಸಿನಿಮಾವನ್ನು ತಮಿಳಿನ ವಿಜಯ್‌ ಆರ್‌. ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಸಿನಿಮಾದ ಹೆಸರುಗಳು ಇನ್ನಷ್ಟೇ ಅಂತಿಮವಾಗಬೇಕಿದೆ. ಇತ್ತೀಚೆಗಷ್ಟೇ ಈ ಸಿನಿಮಾಗಳು ಅಧಿಕೃತವಾಗಿ ಅನೌನ್ಸ್‌ ಆಗಿದ್ದು, ಎರಡು ಸಿನಿಮಾಗಳನ್ನೂ ಎರಡು ಭಾಗಗಳಲ್ಲಿ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

“ಈ ಹಿಂದೆಯೂ ಕೆಲವು ಅವಕಾಶಗಳು ಬಂದಿದ್ದವು. ಆದರೆ, ಕಥೆ ಮತ್ತು ಪಾತ್ರ ಇಷ್ಟವಾಗದ ಕಾರಣ, ಯಾವ ಸಿನಿಮಾವನ್ನು ಒಪ್ಪಿರಲಿಲ್ಲ. ಈಗ ಒಪ್ಪಿರುವ ಕಥೆಗಳಲ್ಲಿ ನನ್ನ ಪಾತ್ರಕ್ಕೆ ಸಾಕಷ್ಟು ಸ್ಕೋಪ್‌ ಇದೆ. ಒಬ್ಬ ನಟಿಯಾಗಿ ಎಲ್ಲ ತರಹದ ಪಾತ್ರಗಳನ್ನು ಮಾಡಬೇಕೆಂಬುದು ನನ್ನ ಇಷ್ಟ. ಈ ಚಿತ್ರಗಳಲ್ಲಿ ನನ್ನ ಪ್ರತಿಭೆ ತೋರಿಸುವುದಕ್ಕೆ ಸಾಕಷ್ಟು ಅವಕಾಶಗಳಿವೆ. ಈ ಸಿನಿಮಾಗಳ ಮೂಲಕ ನಾಯಕಿಯಾಗಬೇಕೆಂಬ ಬಹಳ ವರ್ಷಗಳ ಕನಸು ನನಸಾಗಿದೆ’ ಎನ್ನುತ್ತಾರೆ ನಟಿ ಗಗನ ಕುಂಚಿ.

Advertisement

Udayavani is now on Telegram. Click here to join our channel and stay updated with the latest news.

Next