ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಆನೆ ಬಲರಾಮ ನಿನ್ನೆ ಅನಾರೋಗ್ಯದಿಂದ ಮೃತಪಟ್ಟಿದ್ದು. ಆತನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.
Advertisement
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನಲ್ಲಿ ನಡೆದ ಅಪ್ರತಿಮ ದಸರಾ ಆಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ತಾಯಿ ಚಾಮುಂಡೇಶ್ವರಿಯ ಮೂರ್ತಿಯನ್ನು ಹೊತ್ತುಕೊಂಡಿದ್ದನ್ನು ಜನರು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ. ಬಲರಾಮನ ಅಗಲಿಕೆ ದುಃಖ ತಂದಿದೆ. ಓಂ ಶಾಂತಿ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.