Advertisement
ಮಲ್ಲೇಶ್ವರಂನಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್ ಅವರ ಪುತ್ರ ಥಾಮಸ್ ಜಾನ್, ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು.
Related Articles
Advertisement
ದೇಶದ ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಿನಂತೆ ಕೆಲಸ ಮಾಡಿರುವ ಮೋದಿ ಅವರಿಗೆ ವಂದನೆಗಳು. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ, ಬಾಹ್ಯ ಬೆಂಬಲ ಬೇಡ. ಬಿಜೆಪಿಗೆ ಬಂದು ಕೆಲಸ ಮಾಡಿ ಎಂದು ಆಹ್ವಾನ ನೀಡಿದರು. ಅವರ ಆಹ್ವಾನ ಸ್ವೀಕರಿಸಿ ಬಂದಿದ್ದೇನೆ. ಇದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ರೆಡ್ಡಿ ಹೇಳಿದರು.
ಬಿ.ಎಸ್. ಯಡಿಯೂರಪ್ಪ ಅವರು ನನಗೆ ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅವರ ಕ್ಯಾಬಿನೆಟ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈಗ ಅವರ ಸುಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.