Advertisement
ಮುಂಬರುವ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿರುವದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಈ ಚುನಾವಣೆ ಮಹತ್ವದ್ದು. ಈಗಿನ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇದು ಅಗ್ನಿಪರೀಕ್ಷೆಯಾಗಿದ್ದರೆ ಲೋಕಸಭೆಯಲ್ಲಿ ಮತ್ತೆ ಅಧಿಕಾರ ಹಿಡಿಯುವ ಗುರಿಹೊಂದಿರುವ ಬಿಜೆಪಿಗೆ ಸವಾಲಿನ ಪ್ರಶ್ನೆಯಾಗಿದೆ. ರಾಜ್ಯದಲ್ಲಿ ಸರಕಾರ ನಡೆಸುತ್ತಿದ್ದರೂ ಜೆಡಿಎಸ್ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ.
Related Articles
Advertisement
ಆದರೆ ಚಿಕ್ಕೋಡಿ ಪುರಸಭೆಯಲ್ಲಿ ಈ ವಾತಾವರಣ ಇಲ್ಲ. ಈ ಪುರಸಭೆಯಲ್ಲಿ ಪಕ್ಷದ ಆಧಾರದ ಮೇಲೆ ಚುನಾವಣೆ ನಡೆಯುತ್ತಿಲ್ಲ. ಬದಲಾಗಿ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಬೆಂಬಲಿತ ಗುಂಪಿಗೆ ಒಲಿದಿದ್ದ ಪುರಸಭೆಯನ್ನು ಕಸಿದುಕೊಳ್ಳಲು ಬಿಜೆಪಿ ರಣತಂತ್ರ ರೂಪಿಸಿದೆ. ಇನ್ನು ಜಿಲ್ಲಾ ಉಸ್ತುವಾರಿ ರಮೇಶ ಜಾರಕಿಹೊಳಿ ಅವರ ಕ್ಷೇತ್ರ ಗೋಕಾಕ ನಗರಸಭೆಯಲ್ಲಿ ಈ ಬಾರಿಯೂ ಅವರದೇ ಗುಂಪಿನ ಬೆಂಬಲಿಗರ ಆಟ ಜೋರಾಗಿದೆ. ಇಲ್ಲಿ ಸಹ ಪಕ್ಷದ ಹೆಸರಿನಲ್ಲಿ ಚುನಾವಣೆ ನಡೆಯುತ್ತಿಲ್ಲ.
ಬೈಲಹೊಂಗಲದಲ್ಲಿ ಈ ಬಾರಿ ಕಾಂಗ್ರೆಸ್ ಶಾಸಕರು ಇರುವುದರಿಂದ ಪುರಸಭೆ ಮೇಲೆ ಹಿಡಿತ ಸಾಧಿಸುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಇದೆ. ಕಳೆದ ಬಾರಿ ಈ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದರೂ ಕಾಂಗ್ರೆಸ್ ಅಧಿಕಾರ ಹಿಡಿದಿತ್ತು.ಈ ಬಾರಿಯೂ ಅದೇ ಮುಂದುವರಿಯಲಿದೆ ಎಂಬುದು ಕಾರ್ಯಕರ್ತರ ವಿಶ್ವಾಸ. ಸವದತ್ತಿಯಲ್ಲಿ ಬಿಜೆಪಿ ಶಾಸಕರು ಇರುವುದರಿಂದ ಅಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂಬುದು ಬಿಜೆಪಿ ಲೆಕ್ಕಾಚಾರ.
ಆದರೆ ರಾಮದುರ್ಗದ ಪುರಸಭೆ ಮೇಲಿದ್ದ ಕಾಂಗ್ರೆಸ್ ಧ್ವಜವನ್ನು ಕೆಳಗಿಳಿಸಲು ಬಿಜೆಪಿ ತಾಲೀಮು ನಡೆಸಿದ್ದು, ಇದಕ್ಕೆ ಸ್ಥಳೀಯ ಬಿಜೆಪಿ ಶಾಸಕರು ಶಕ್ತಿ ತುಂಬಿದ್ದಾರೆ. ಖಾನಾಪುರ ಪಟ್ಟಣ ಪಂಚಾಯತ್‌ದಲ್ಲಿ ಈ ಬಾರಿ ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬೇಕು ಎಂಬ ಲೆಕ್ಕಾಚಾರದಲ್ಲಿದೆ. ಇದೇ ಪ್ರಥಮ ಬಾರಿಗೆ ಈ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಅಂಜಲಿ ನಿಂಬಾಳ್ಕರ ಮೇಲೆ ಬಹಳ ಜವಾಬ್ದಾರಿ ಇದೆ.
ಪಕ್ಷಗಳ ಲೆಕ್ಕಾಚಾರ ಈಗ ಚುನಾವಣೆ ನಡೆಯುತ್ತಿರುವ 14 ಸ್ಥಳೀಯ ಸಂಸ್ಥೆಗಳಲ್ಲಿ ಎಂಟರಿಂದ ಹತ್ತು ಸ್ಥಳೀಯ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವ ಲೆಕ್ಕಾಚಾರದಲ್ಲಿ ಬಿಜೆಪಿ ಇದ್ದರೆ ಕಾಂಗ್ರೆಸ್ ಇದೇ ಲೆಕ್ಕಾಚಾರದ ಮೇಲೆ ಚುನಾವಣೆ ಪ್ರಚಾರ ಆರಂಭಿಸಿದೆ. ಹುಕ್ಕೇರಿ ಹಾಗೂ ಸಂಕೇಶ್ವರದಲ್ಲಿ ತಮ್ಮ ಪ್ರಭಾವ ಹೊಂದಿರುವ ಶಾಸಕ ಉಮೇಶ ಕತ್ತಿ ಈ ಎರಡೂ ಕಡೆ ಬಿಜೆಪಿ ಅಧಿಕಾರ ಹಿಡಿಯುವಂತೆ ಕಸರತ್ತು ನಡೆಸಿದ್ದಾರೆ. ಆದರೆ ಇಲ್ಲಿ ಕಾಂಗ್ರೆಸ್‌ನ ಎ.ಬಿ. ಪಾಟೀಲ ಬಣ ತುರುಸಿನ ಪೈಪೋಟಿ ಒಡ್ಡಿರುವುದರಿಂದ ಚುನಾವಣೆ ಕುತೂಹಲ ಹುಟ್ಟಿಸಿದೆ. ನಿಪ್ಪಾಣಿಯಲ್ಲಿ ಸಹ ಬಿಜೆಪಿ ಶಾಸಕರಿರುವುದರಿಂದ ಅಲ್ಲಿ ಸಹ ತಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿ ಬಿಜೆಪಿ ಇದೆ. ಎಂಟು ವಶದ ವಿಶ್ವಾಸ
ವಾತಾವರಣ ಉತ್ತಮವಾಗಿದೆ. 14 ಸ್ಥಳೀಯ ಸಂಸ್ಥೆಗಳ ಪೈಕಿ ಕನಿಷ್ಠ ಎಂಟರಲ್ಲಿ ನಾವು ಅಧಿಕಾರ ಹಿಡಿಯುತ್ತೇವೆ. ಈ ನಿಟ್ಟಿನಲ್ಲಿ ನಾವು ಈಗಾಗಲೇ ಪ್ರಚಾರ ಶುರುಮಾಡಿದ್ದೇವೆ. ಎಲ್ಲಿಯೂ ನಮಗೆ ಸಮಸ್ಯೆ ಕಾಣುತ್ತಿಲ್ಲ.
ಶಶಿಕಾಂತ ನಾಯಕ, ಬಿಜೆಪಿ ಮುಖಂಡ ಹತ್ತರಲ್ಲಿ ಗೆಲುವು
ಕಾಂಗ್ರೆಸ್‌ಗೆ ಬಹಳ ಅನುಕೂಲಕರ ವಾತಾವರಣ ಇದೆ. ಎಲ್ಲಿಯೂ ನಮಗೆ ಹಿನ್ನಡೆ ಕಾಣುತ್ತಿಲ್ಲ. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿರುವುದರಿಂದ ನಾವು 10 ಸ್ಥಳೀಯ ಸಂಸ್ಥೆಗಳನ್ನು ಗೆಲ್ಲುವ ವಿಶ್ವಾಸ ಇದೆ.
ವಿನಯ ನಾವಲಗಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವ ಆದಿ