ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
Advertisement
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಕರಣದ ಬಗ್ಗೆ ನಡೆಸಲಾದ ಸಿಐಡಿ ತನಿಖೆಯಲ್ಲಿ ಸಾಕ್ಷ್ಯ ನಾಶವಾಗಿರುವ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನು ಪರಿಗಣಿಸದೇ ಇರುವುದರಿಂದ ಈ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಈ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಿರುವುದು ಮತ್ತು ಗಣಪತಿ ಅವರ ಮೊಬೈಲ್ ಕಾಲ್ ರೆಕಾರ್ಡ್ ನಾಶ ಮಾಡಿರುವ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿಯಲ್ಲಿ ಗೊತ್ತಾಗಿದೆ. ಇದಕ್ಕೆ ಸಿದ್ದರಾಮಯ್ಯ ಅವರೇ ಜವಾಬ್ದಾರರು. ಹೀಗಾಗಿ, ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಹಬ್ಬ ಮುಗಿದ ಬಳಿಕ ಪಕ್ಷದ ವತಿಯಿಂದ ರಾಜ್ಯಾದ್ಯಂತ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಜತೆಗೆ, ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ಸಿಬಿಐ ತನಿಖೆಗೆ ವಹಿಸುವಂತೆ ಆ.26ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಸಾಧ್ಯವಾದರೆ ಪ್ರಧಾನಿಯವರಿಗೂ ಈ ಕುರಿತು ಮನವಿ ಮಾಡಲಾಗುವುದು ಎಂದು ಹೇಳಿದರು.
ಅವರ ಕಾಲ್ ರೆಕಾರ್ಡ್‌ನಲ್ಲಿದ್ದ ಫೋನ್ ಕರೆಗಳು, ಎಸ್‌ಎಂಎಸ್, ಮೊಬೈಲ್ ಸಂಖ್ಯೆಗಳು, ಕಂಪ್ಯೂಟರ್‌ನಲ್ಲಿದ್ದ ದಾಖಲೆಗಳು ನಾಪತ್ತೆಯಾಗಿರುವುದನ್ನು ಗಮನಿಸಿದಾಗ ಆರೋಪ ಕೇಳಿ ಬಂದ ಸಚಿವರು ಮತ್ತು ಅಧಿಕಾರಿಗಳನ್ನು ರಕ್ಷಣೆ ಮಾಡಲೆಂದೇ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ ಎಂಬುದು ಸ್ಪಷ್ಟವಾಗಿದೆ. ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಬಿಜೆಪಿ ಈ ಹಿಂದೆ ಮಾಡಿದ್ದ ಆರೋಪಕ್ಕೆ ಪುಷ್ಠಿ ಸಿಕ್ಕಿದೆ ಎಂದು ಹೇಳಿದರು.
Related Articles
ಉಡುಪಿ: “ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಸಂದರ್ಭ ಯಾವುದೇ ಕರೆಗಳು ನನಗೆ ಬಂದಿರಲಿಲ್ಲ’ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ತಿಳಿಸಿದ್ದಾರೆ.
Advertisement
ಗಣಪತಿ ಸಾವು ಪ್ರಕರಣಕ್ಕೆ ಸಂಬಂಧಿಸಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಕಾಲ… ಮಾಡಿದವರ ವಿವರಡಿಲೀಟ… ಆದ ಕುರಿತು ಬಂದ ಸುದ್ದಿ ಕುರಿತಂತೆ ಪ್ರತಿಕ್ರಿಯೆ ಕೇಳಿದಾಗ “ಪುತ್ತೂರಲ್ಲಿ ಶಾಸಕನಾಗಿ¨ªಾಗ ಎಸ್‌ಐ ಆಗಿದ್ದರು. ಉತ್ತಮ, ಕಟ್ಟುನಿಟ್ಟಿನ ಅಧಿಕಾರಿಯಾಗಿದ್ದರು. ಆಗ ಅವರ ಸಂಪರ್ಕ ಇತ್ತು. ಅಮಾನತು ಆದ ಸಂದರ್ಭದಲ್ಲಿ ನನ್ನನ್ನು ಸಂಪರ್ಕಿಸಿದ್ದರು. ಮಂತ್ರಿಯಾಗಿದ್ದ ಸಂದರ್ಭ ಮನೆಗೂ ಬರುತ್ತಿದ್ದರು. ಅಮಾನತು ವಾಪಸ್ ಪಡೆದುಕೊಳ್ಳಲು ಆಯುಕ್ತರು, ಗೃಹಸಚಿವರ ಜತೆ ಮಾತನಾಡುವಂತೆ ಮನವಿ ಮಾಡಿದ್ದರು. ಗೃಹಸಚಿವರಾಗಿದ್ದ ಸಚಿವ ಕೆ.ಜೆ.ಜಾರ್ಜ್ ಅವರು ಗಣಪತಿಯವರಿಗೆ ಸಹಾಯ ಮಾಡಿದ್ದರು. ಬಳಿಕ ಯಾವುದೇ ಸಂಪರ್ಕ ಇರಲಿಲ್ಲ’ ಎಂದರು.