Advertisement

ಕುಲಗಾಣದಲ್ಲಿ ವಿಜೃಂಭಣೆಯಿಂದ ನಡೆದ ಗಣಪತಿ ಮೆರವಣಿಗೆ

08:14 PM Sep 04, 2022 | Team Udayavani |

ಚಾಮರಾಜನಗರ: ತಾಲೂಕಿನ ಕುಲಗಾಣ ಗ್ರಾಮದ ತೇರಿನ ಬೀದಿಯಲ್ಲಿ ವಿದ್ಯಾ ಗಣಪತಿ ಮಂಡಳಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ವಿಸರ್ಜನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು.

Advertisement

ಗ್ರಾಮದ ತೇರಿನ ಮನೆಯ ಸಮೀಪದಲ್ಲಿ ವಿದ್ಯಾ ಗಣಪತಿ ಮಂಡಳಿಯಿಂದ ಗಣೇಶ ಚತುರ್ಥಿಯಂದು ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು. ಭಾನುವಾರ ವಿಸರ್ಜನೋತ್ಸವ ಹಮ್ಮಿಕೊಳ್ಳಲಾಗಿತ್ತು.

ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠಾಧೀಶರಾದ ಶ್ರೀ ಚೆನ್ನಬಸವ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವೀರಗಾಸೆ, ನಂದಿ ಕಂಬ, ಮಂಗಳ ವಾದ್ಯ ಕಲಾತಂಡಗಳು ಭಾಗವಹಿಸಿದ್ದವು. ಪ್ರಸಾದ ವಿನಿಯೋಗ ನಡೆಯಿತು.

ಗಣೇಶ ಮೂರ್ತಿಯ ಮೆರವಣಿಗೆ ತೇರಿನ ಮನೆಯ ಮುಂಭಾಗದಿಂದ ಹೊರಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ, ಸಂಜೆ ವೇಳೆ ಗ್ರಾಮದ ತಮ್ಮಡಿ ಕೆರೆಯಲ್ಲಿ ವಿಸರ್ಜಿಸಲಾಯಿತು.ಗ್ರಾಮಸ್ಥರು, ವಿದ್ಯಾಗಣಪತಿ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next