Advertisement
ಅನಾದಿ ಕಾಲದಿಂದಲೂ ವಿಶೇಷ ರೀತಿಯಲ್ಲಿಯೇ ಮಹಾಗಣಪತಿ ವಿಸರ್ಜನಾ ಮಹೋತ್ಸವ ನಡೆದುಕೊಂಡು ಬಂದಿದ್ದು ದೀಪಾವಳಿ ಹಬ್ಬದಂದು 18 ಕೋಮಿನ ಸಮ್ಮುಖದಲ್ಲಿ ಪ್ರತಿಷ್ಠಾಪನೆಗೊಂಡು ಒಂದು ತಿಂಗಳ ಕಾಲ ಪೂಜಿಸಿ ಆರಾಧಿಸಿ ನಂತರವಿಸರ್ಜನೆ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ.
ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವಯುತವಾಗಿ ನಡೆಯಿತು. ಬಲಿಪಾಡ್ಯಮಿಯಂದು ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ವಿಸರ್ಜಿಸಲಾಯಿತು.
Related Articles
Advertisement
ವಿಶೇಷ ಪೂಜೆ ಸಲ್ಲಿಕೆ: ಎರಡು ದಿನಗಳ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧೆಡೆ ಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಶನಿವಾರ ಸಂಜೆ 7 ಗಂಟೆಗೆ ಊರಿನ ಯಜಮಾನರಮನೆಯಿಂದ ನಂದಿಧ್ವಜ ಮತ್ತು ಕರಡಿ ವಾದ್ಯದೊಂದಿಗೆ ಗಣಪತಿ ದೇವಾಲಯಕ್ಕೆ ಕಳಸ ತಂದು ಮಹಾಗಣಪತಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು. ಸಿಡಿಮದ್ದು ಸಿಡಿಸಿ ಸಂಭ್ರಮ: ಗಣೇಶಮೂರ್ತಿಯ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಗ್ರಾಮದ ಜನತೆ ಮತ್ತು ಭಕ್ತಾದಿಗಳು ವಿN°àಶ್ವರಿಗೆ ಪೂಜೆ ಸಲ್ಲಿಸಿ ಧನ್ಯತೆ ಮೆರೆದರು. ವೈಭವೋಪೇತ ಮೆರವಣಿಗೆ ಮುಖೇನ ಗೂಳೂರು ಕೆರೆ ಬಳಿ ಸಾಗಿದ ಗಣೇಶಮೂರ್ತಿಯನ್ನು ಆಕರ್ಷಕ ಸಿಡಿಮದ್ದನ್ನು ಸಿಡಿಸಿ ಸಂಭ್ರಮಿಸಿದ ನಂತರ ಕೆರೆಯಲ್ಲಿ ವಿಸರ್ಜಿಸಲಾಯಿತು. ಗೂಳೂರು ಶ್ರೀಮಹಾಗಣಪತಿ ಭಕ್ತಮಂಡಳಿಯ ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ವಿಸರ್ಜನಾ ಮಹೋತ್ಸವದಲ್ಲಿ ನಾಡಿನ ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. ಪಾನಕ ಮಜ್ಜಿಗೆ ವಿತರಣೆ: ಮಹಾಗಣಪತಿ ಉತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಸುಡುಬಿಸಿಲಿನಲ್ಲಿ ನಡೆದ ಮೆರವಣಿಗೆಯಲ್ಲಿ ಭಕ್ತರಿಗೆ ಹೆಸರು ಬೇಳೆ ಮಜ್ಜಿಗೆ, ಪಾನಕ, ನೀರು ವಿತರಿಸುತ್ತಿದ್ದರು. ಮುಸ್ಲಿಮರು ಸೇರಿ ಅನೇಕ ಭಕ್ತರು ಸಾಮೂಹಿಕ ವಾಗಿ ಸೇವೆ ಸಲ್ಲಿಸಿದರು. ಗುಂಪು ಗಲಭೆ: ಜಾತ್ರಾ ಮಹೋತ್ಸವ ಆರಂಭವಾದಾಗ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದು ಉಳಿದಂತೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಗಣೇಶ ಮಹೋತ್ಸವ ಯಶಸ್ವಿಯಾಗಿ ನಡೆಯಿತು. ಬಿಗಿ ಭದ್ರತೆ: ಮಹಾಗಣಪತಿ ವಿಸರ್ಜನಾ ಮಹೋತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.