ಬೆಂಗಳೂರು: ನಕಲಿ ಗಾಂಧಿ ವಂಶದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮೂರನೇ ದರ್ಜೆಯವರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಅಸಹಾಯಕಡಿಕೆಶಿ ಹ್ಯಾಷ್ ಟ್ಯಾಗ್ ಅಡಿಯಲ್ಲಿ ಡಿಕೆ ಶಿವಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಕೇಕ್ ತಿನ್ನಿಸದ ವಿಚಾರವಾಗಿ ಬಿಜೆಪಿ ಕರ್ನಾಟಕ ಸರಣಿ ಕೂ ಮಾಡಿದೆ.
‘ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುವ ಈ ಹೊತ್ತಿನಲ್ಲಿ, ನಕಲಿ ಗಾಂಧಿ ವಂಶದವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಮೂರನೇ ದರ್ಜೆಯವರಂತೆ ನಡೆಸಿಕೊಳ್ಳುತ್ತಿದ್ದಾರೆ. ಕನಕಪುರದ ಬಂಡೆ ಹೀಗೆ ಬಗ್ಗಿದ್ದು, ಕುಗಿದ್ದು ಅಸಹಾಯಕತನದ ಪರಮಾವಧಿಯಲ್ಲದೆ ಮತ್ತೇನು?’ ಎಂದು ಹೇಳಿದೆ.
ಇದನ್ನೂ ಓದಿ:ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!
Related Articles
‘ಕೇಕ್ ತಿನ್ನಿಸಲು ನಿರಾಕರಣೆ, ರಮ್ಯಾ ಟ್ವೀಟ್ ದಾಳಿ, ಎಂಬಿ ಪಾಟೀಲ್ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಮತ್ತು ಬಣದ ಇತ್ತೀಚೆಗಿನ ನಡೆ, ಕೆಪಿಸಿಸಿ ಕಚೇರಿಯಲ್ಲಿ ಭ್ರಷ್ಟಾಚಾರದ ಆರೋಪ ಇದೆಲ್ಲವೂ ಡಿಕೆ ಶಿವಕುಮಾರ್ ಅವರನ್ನು ಹರಕೆಯ ಕುರಿ ಮಾಡುವ ತಂತ್ರ. ಈ ಎಲ್ಲ ಘಟನೆಗಳು ಏನೋ ಮುನ್ಸೂಚನೆ ನೀಡುತ್ತಿರುವುದು ನಿಜವಲ್ಲವೇ?’ ಎಂದು ಪ್ರಶ್ನಿಸಿದೆ.
Advertisement– BJP KARNATAKA (@BJP4Karnataka) 17 May 2022